Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:27 - ಕನ್ನಡ ಸಮಕಾಲಿಕ ಅನುವಾದ

27 ಈ ಪತ್ರವನ್ನು ಸಹೋದರ ಸಹೋದರಿಯರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತ ಯೇಸುವಿನ ಹೆಸರಿನಲ್ಲಿ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಈ ಪತ್ರವನ್ನು ಎಲ್ಲ ಸಹೋದರರಿಗೂ ಓದಿಹೇಳಬೇಕೆಂದು ಪ್ರಭುವಿನ ಹೆಸರಿನಲ್ಲಿ ವಿಧಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನ ಆಣೆ ಇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈ ಪತ್ರವನ್ನು ಸಹೋದರ ಸಹೋದರಿಯರಿಗೆಲ್ಲಾ ಓದಿ ತಿಳಿಸಬೇಕೆಂದು ನಾನು ನಿಮಗೆ ಪ್ರಭುವಿನ ಅಧಿಕಾರದಿಂದ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಹಿ ಚಿಟಿ ಸಗ್ಳ್ಯಾ ಕ್ರಿಸ್ತಾ ವರ್ತಿ ವಿಶ್ವಾಸ್ ಥವಲ್ಲ್ಯಾ ಲೊಕಾಂಚ್ಯಾ ಇದ್ರಾಕ್ ವಾಚ್ವಾ ಮನುನ್ ಧನಿಯಾಚ್ಯಾ ಅದಿಕಾರಾನ್ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:27
19 ತಿಳಿವುಗಳ ಹೋಲಿಕೆ  

ಈ ಪತ್ರವನ್ನು ನಿಮ್ಮ ಮಧ್ಯದಲ್ಲಿ ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿ ಹೇಳುವ ವ್ಯವಸ್ಥೆಮಾಡಿರಿ. ಹಾಗೆಯೇ ಲವೊದಿಕೀಯದಿಂದ ಬರುವ ಪತ್ರವನ್ನು ನೀವೂ ಓದಿಕೊಳ್ಳಿರಿ.


ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.


ವಿಧವೆಯರು ನಿಂದೆಗೆ ಗುರಿಯಾಗದಂತೆ ಇವುಗಳನ್ನು ಆಜ್ಞಾಪಿಸು.


ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸದಲ್ಲಿ ಇದ್ದುಕೊಂಡು ಸುಳ್ಳು ಬೋಧನೆಯನ್ನು ಉಪದೇಶಿಸಬಾರದೆಂತಲೂ


ಕೆಲವು ಯೆಹೂದ್ಯರು ದುರಾತ್ಮಗಳನ್ನು ಬಿಡಿಸಲು ಪ್ರಯತ್ನಿಸಿ, “ಪೌಲನು ಸಾರುತ್ತಿರುವ ಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಆಜ್ಞಾಪಿಸುತ್ತೇನೆ,” ಎಂದು ಅವರು ಕರ್ತ ಯೇಸುವಿನ ಹೆಸರನ್ನು ಬಳಸಲು ಪ್ರಯತ್ನಿಸಿದರು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.


ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.


ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ಎಲ್ಲಕ್ಕೂ ಜೀವ ನೀಡುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಒಳ್ಳೆಯ ಅರಿಕೆಯನ್ನು ಸಾಕ್ಷಿಯಾಗಿ ನೀಡಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳವುದೇನೆಂದರೆ:


ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ.


ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ಯೆರೆಮೀಯನು ಸೆರಾಯನಿಗೆ ಹೇಳಿದ್ದೇನೆಂದರೆ, “ನೀನು ಬಾಬಿಲೋನಿಗೆ ಬಂದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು