Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:7 - ಕನ್ನಡ ಸಮಕಾಲಿಕ ಅನುವಾದ

7 ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿದ್ರೆಯೂ ಕುಡುಕತನವೂ ರಾತ್ರಿಗೆ ಸಂಬಂಧಿಸಿದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿದ್ದೆಮಾಡುವವರು ರಾತ್ರಿಯಲ್ಲಿ ನಿದ್ದೆಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿದ್ದೆ ಮಾಡುವ ಜನರು ರಾತ್ರಿಯಲ್ಲಿ ನಿದ್ರಿಸುತ್ತಾರೆ. ಕುಡಿದು ಅಮಲೇರುವವರು ರಾತ್ರಿಯಲ್ಲಿ ಕುಡಿದು ಅಮಲೇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ನಿತ್ತಲೆ ರಾಚ್ಚೆ ನಿಜ್ತಾತ್, ಅನಿ ಫಿವ್ನ್ ನಿಶೆತ್ ರ್‍ಹಾತಲೆಬಿ ರಾಚ್ಚೆ ಫಿವ್ನ್ ನಿಶೆತ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:7
14 ತಿಳಿವುಗಳ ಹೋಲಿಕೆ  

ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯನ್ನು ಹಗಲಲ್ಲಿ ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಕಳಂಕಕ್ಕೂ, ನಿಂದೆಗೂ ಕಾರಣರಾಗಿದ್ದಾರೆ.


ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.


ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ.


ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ!


ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಸ್ವಪ್ನದಲ್ಲಿ, ರಾತ್ರಿಯ ದರ್ಶನದಲ್ಲಿ, ಗಾಢನಿದ್ರೆಯು ಮನುಷ್ಯರಿಗೆ ಬಂದಾಗ, ಹಾಸಿಗೆಯ ಮೇಲಿನ ತೂಕಡಿಕೆಗಳಲ್ಲಿ ಸಹ,


ರಾತ್ರಿ ಕನಸಿನ ಆಲೋಚನೆಗಳಲ್ಲಿಯೂ ಗಾಢನಿದ್ರೆಯು ಜನರಿಗೆ ಹತ್ತುವಾಗಲೂ


“ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು