Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:7 - ಕನ್ನಡ ಸಮಕಾಲಿಕ ಅನುವಾದ

7 ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾವಾನನ ಸಂತಾನದವರು ಯಾರೆಂದರೆ ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎಲೀಷ, ಸ್ಪೇನ್, ಸೈಪ್ರಸ್, ದೋದಾನೀಮ್ ಎಂಬ ಸ್ಥಳಗಳವರು ಯಾವಾನನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವಾನನ ಸಂತಾನದವರು - ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾವಾನನ ಗಂಡುಮಕ್ಕಳು: ಎಲೀಷ, ತಾರ್ಷೀಷ್, ಕಿತ್ತೀಮ್ ಮತ್ತು ದೋದಾನೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:7
12 ತಿಳಿವುಗಳ ಹೋಲಿಕೆ  

ಏಕೆಂದರೆ ಕಿತ್ತೀಮಿನ ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು.


ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ. ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳಿದುಕೊಳ್ಳಿರಿ. ಅಂಥದ್ದು ಉಂಟೋ ಎಂದು ನೋಡಿರಿ.


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


“ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಸಂತೃಪ್ತಿ ಇಲ್ಲ. “ಎದ್ದು, ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು. ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.”


ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.


ಕಿತ್ತೀಮೆಂಬ ತೀರದಿಂದ ಹಡಗುಗಳು ಬಂದು, ಅಸ್ಸೀರಿಯರನ್ನೂ, ಏಬೆರ್ ಜನರನ್ನೂ ಸೋಲಿಸುವುವು. ಅವನು ಸಹ ಸದಾಕಾಲಕ್ಕೂ ನಾಶವಾಗುವನು.”


ನಿನ್ನ ಹುಟ್ಟುಗೋಲನ್ನು ಬಾಷಾನಿನ ಅಲ್ಲೋನ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಮ್ ದ್ವೀಪಗಳಿಂದ ತಂದ ಹಲಗೆಗಳಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಶೃಂಗರಿಸಿದ್ದಾರೆ.


ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.


ಗೋಮೆರನ ಪುತ್ರರು: ಅಷ್ಕೆನಜ್, ರೀಫತ್, ತೋಗರ್ಮ.


ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.


ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು ಮತ್ತು ಅದು ನಿನ್ನ ಧ್ವಜವಾಗಿತ್ತು. ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು