Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:13 - ಕನ್ನಡ ಸಮಕಾಲಿಕ ಅನುವಾದ

13 ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೌಲನು ಯೆಹೋವನಿಗೆ ಅವಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:13
18 ತಿಳಿವುಗಳ ಹೋಲಿಕೆ  

“ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


“ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”


ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿ ತೊಂದರೆಪಡಿಸಿದರು, ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.


“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ನಿಮ್ಮನ್ನು ನಿರೀಕ್ಷಿಸುವವರಲ್ಲಿ ಯಾರೂ ನಾಚಿಕೆಪಡದಿರಲಿ; ನಿಷ್ಕಾರಣವಾಗಿ ವಂಚನೆ ಮಾಡುವವರು ನಾಚಿಕೆಪಡಲಿ.


ದೇವರೇ, ನಿಮ್ಮಿಂದ ದೂರವಾಗಿರುವವರು ನಾಶವಾಗುತ್ತಾರೆ; ನಿಮ್ಮನ್ನು ಬಿಟ್ಟು ದ್ರೋಹ ಮಾಡುವವರೆಲ್ಲರೂ ದಂಡನೆಗೆ ಗುರಿಯಾಗುವರು.


ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು; ದ್ರೋಹಿಗಳು ಬೇರುಸಹಿತವಾಗಿ ಕಿತ್ತುಹಾಕಲಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು