1 ಪೂರ್ವಕಾಲ ವೃತ್ತಾಂತ 10:4 - ಕನ್ನಡ ಸಮಕಾಲಿಕ ಅನುವಾದ4 ಆಗ ಸೌಲನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ, ನೀನು ನಿನ್ನ ಖಡ್ಗವನ್ನು ಹಿರಿದು ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು, ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿ ತಂದಾರು” ಎಂದು ಹೇಳಲು ಅವನು ಹೆದರಿ ಹಿಂಜರಿದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು, ಅದರ ಮೇಲೆ ಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಅವನು ತನ್ನ ಆಯುಧವಾಹಕ ಯುವಕನನ್ನು ಕರೆದು, ‘ದೇವರಲ್ಲಿ ನಂಬಿಕೆ ಇಲ್ಲದ ಈ ಫಿಲಿಷ್ಟಿಯರ ಹಸ್ತಗಳಿಂದ ನಾನು ಸಾಯಬಾರದು. ನಿನ್ನ ಖಡ್ಗವನ್ನು ಹಿಡಿದು ನನ್ನನ್ನು ಕೊಂದುಬಿಡು’, ಎಂದನು. ಆದರೆ ಆ ಯುವಕನು ಭಯಗೊಂಡು ಹಿಂಜರಿದನು. ಸೌಲನು ತನ್ನ ಖಡ್ಗವನ್ನೇ ಎತ್ತಿಟ್ಟು ಅದರ ಮೇಲೆ ಹಾರಿಬಿದ್ದು ಸತ್ತುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದದರಿಂದ ಸೌಲನು ಭೀತನಾಗಿ ತನ್ನ ಆಯುಧವಾಹಕನಿಗೆ - ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿಯನ್ನುಂಟು ಮಾಡಾರು ಎಂದು ಹೇಳಲು ಅವನು ಹೆದರಿ ಒಲ್ಲೆನು ಅಂದನು. ಆದದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಖಡ್ಗದಿಂದ ನನ್ನನ್ನು ಇರಿದು ಕೊಂದುಹಾಕು. ಆಗ ಪರದೇಶಿಯರು ಬಂದು ನನ್ನನ್ನು ಗಾಯಪಡಿಸಿ ಹಾಸ್ಯಮಾಡಲು ಸಾಧ್ಯವಾಗುವುದಿಲ್ಲ” ಎಂದನು. ಆದರೆ ಅವನ ಆಯುಧಹೊರುವವನು ಅದಕ್ಕೆ ಒಪ್ಪಲಿಲ್ಲ; ಸೌಲನನ್ನು ಕೊಲ್ಲಲು ಅವನು ಹೆದರಿದನು. ಆಗ ಸೌಲನು ತನ್ನ ಖಡ್ಗದ ಮೇಲೆ ತಾನೇ ಬಿದ್ದು ಸತ್ತನು. ಅಧ್ಯಾಯವನ್ನು ನೋಡಿ |