Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:7 - ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರು ಸೋತು ಹೋದರು. ಸೌಲನೂ, ಅವನ ಮಕ್ಕಳು ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಗ್ಗಿನಲ್ಲಿ ನೆಲೆಸಿದ್ದ ಇಸ್ರಯೇಲರು ತಮ್ಮ ಸೈನ್ಯವು ಪಲಾಯನಗೈಯಿತು ಮತ್ತು ಸೌಲನೂ ಅವನ ಮಕ್ಕಳೂ ಮರಣ ಹೊಂದಿದರು ಎಂಬ ವಾರ್ತೆಯನ್ನು ಕೇಳಿ ಅವರೂ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಅನಂತರ ಫಿಲಿಷ್ಟಿಯರು ಬಂದು ಅವುಗಳನ್ನು ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ ಭಟರು ಸೋತರು, ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು; ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತಗ್ಗಿನಲ್ಲಿ ವಾಸಿಸುತ್ತಿದ್ದ ಇಸ್ರೇಲರು ತಮ್ಮ ಸೈನ್ಯವು ವೈರಿಗಳಿಂದ ಓಡಿಸಲ್ಪಡುವದನ್ನು ನೋಡಿದರು. ಅರಸನಾದ ಸೌಲನು ಮತ್ತು ಅವನ ಗಂಡುಮಕ್ಕಳು ಸತ್ತುಹೋಗಿರುವುದು ಅವರಿಗೆ ತಿಳಿಯಿತು. ಆಗ ಅವರೂ ತಮ್ಮತಮ್ಮ ಮನೆಗಳನ್ನು ಬಿಟ್ಟು ಓಡಿದರು. ಫಿಲಿಷ್ಟಿಯರು ಅವರ ಮನೆಗಳಿಗೆ ಬಂದಾಗ ಯಾರೂ ಇಲ್ಲದ್ದನ್ನು ನೋಡಿ ಅಲ್ಲಿಯೇ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:7
9 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ, ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.


ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.


ನಿಮ್ಮ ಮಧ್ಯದಲ್ಲಿರುವ ಪರದೇಶದವರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುವರು. ನೀವಾದರೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ನಿಮ್ಮ ಪಟ್ಟಣಗಳನ್ನು ನಾನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಸುವಾಸನೆಗಳನ್ನು ಮೂಸಿ ನೋಡದೆ ಇರುವೆನು.


ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಮನೆಯವರೆಲ್ಲರೂ ಒಟ್ಟಾಗಿ ಅದೇ ದಿನ ಸತ್ತರು.


ಮಾರನೆಯ ದಿವಸದಲ್ಲಿ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳಲು ಬಂದಾಗ, ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವ ಸೌಲನನ್ನೂ, ಅವನ ಪುತ್ರರನ್ನೂ ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು