1 ಪೂರ್ವಕಾಲ ವೃತ್ತಾಂತ 10:9 - ಕನ್ನಡ ಸಮಕಾಲಿಕ ಅನುವಾದ9 ಅವರು ಅವನನ್ನು ಸುಲಿದುಕೊಂಡು ಅವನ ತಲೆಯನ್ನೂ, ಅವನ ಆಯುಧಗಳನ್ನೂ ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಫಿಲಿಷ್ಟಿಯರು ಸೌಲನಿಗಿರುವುದೆಲ್ಲವನ್ನು ಸುಲಿದುಕೊಂಡು ಅವನ ತಲೆಯನ್ನೂ, ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೆ ಕಳುಹಿಸಿ, ತಮ್ಮ ದೇವತೆಗಳಿಗೂ, ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸೌಲನ ತಲೆಯನ್ನು ಕಡಿದು ದೇಹದಿಂದ ಬೇರ್ಪಡಿಸಿದರು. ಅವನ ಆಯುಧಗಳನ್ನು ಬಿಚ್ಚಿಕೊಂಡರು. ಅವುಗಳೊಂದಿಗೆ ಸುದ್ದಿವಾಹಕರನ್ನು ತಮ್ಮ ನಾಡಿನ ಎಲ್ಲೆಡೆಗೂ ಕಳುಹಿಸಿ, ಈ ಜಯವಾರ್ತೆಯನ್ನು ತಮ್ಮ ದೇವತೆಗಳಿಗೂ ಜನರಿಗೂ ಮುಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೌಲನಿಗಿರುವದನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ ತಮ್ಮ ದೇವತೆಗಳಿಗೂ ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸೌಲನ ಶರೀರದ ಮೇಲಿದ್ದ ಬೆಲೆಬಾಳುವ ವಸ್ತುಗಳನ್ನು ಅವರು ದೋಚಿಕೊಂಡರು; ಅವನ ತಲೆಯನ್ನೂ ಆಯುಧಗಳನ್ನೂ ತೆಗೆದುಕೊಂಡು ತಮ್ಮ ಊರಿನಲ್ಲಿದ್ದ ಜನರಿಗೂ ಅವರ ಸುಳ್ಳುದೇವರುಗಳಿಗೂ ತಿಳಿಸಲು ಸಂದೇಶಕರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.