Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:16 - ಕನ್ನಡ ಸಮಕಾಲಿಕ ಅನುವಾದ

16 ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಸಮಯದಲ್ಲಿ ದಾವೀದನು ಭದ್ರವಾದ ದಿಣ್ಣೆಯ ಮೇಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮನ್ನು ವಶಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೇತ್ಲೆಹೇವಿುನಲ್ಲಿ ಒಂದು ಕಾವಲುದಂಡನ್ನು ಇಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇನ್ನೊಂದು ಸಮಯದಲ್ಲಿ ದಾವೀದನು ಕೋಟೆಯೊಳಗಿದ್ದನು. ಫಿಲಿಷ್ಟಿಯರ ಸೈನ್ಯ ಬೆತ್ಲೆಹೇಮಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:16
10 ತಿಳಿವುಗಳ ಹೋಲಿಕೆ  

“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.


ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗದತ್ತ ಹೊರಟಿತು.


“ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ಸೌಲನು ನಾಶಮಾಡಿದ್ದರಿಂದ, ಇಸ್ರಾಯೇಲರು ಈಗ ಫಿಲಿಷ್ಟಿಯರಿಗೆ ಅಸಹ್ಯಕರ ಶತ್ರುವಾದರು,” ಎಂಬ ವರ್ತಮಾನವನ್ನು ಸಮಸ್ತ ಇಸ್ರಾಯೇಲರು ಕೇಳಿದರು. ಮತ್ತು ಗಿಲ್ಗಾಲಿಗೆ ಬಂದು ಸೌಲನನ್ನು ಸೇರಿಕೊಳ್ಳಲು ಜನರನ್ನು ಕರೆದರು.


ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.


ಸೌಲನೂ, ಅವನ ಜನರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿದಾಗ, ಅವನು ಬಂಡೆಗಳಲ್ಲಿ ಇಳಿದು ಮಾವೋನಿನ ಮರುಭೂಮಿಯಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಮರುಭೂಮಿಯಲ್ಲಿ ದಾವೀದನನ್ನು ಹಿಂದಟ್ಟಿದನು.


ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಕೋಟೆ ಸ್ಥಳಕ್ಕೆ ಹೋದನು.


ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.


ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ, ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.


ಆದರೆ ಗಾದನೆಂಬ ಪ್ರವಾದಿಯು ದಾವೀದನಿಗೆ, “ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ,” ಎಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು