Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:18 - ಕನ್ನಡ ಸಮಕಾಲಿಕ ಅನುವಾದ

18 ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರಸಿದ್ಧರಾದ ಮೂವರು ರಣವೀರರು ಫಿಲಿಷ್ಟಿಯರ ಪಾಳೆಯವನ್ನು ಹಾದುಹೋಗಿ ಬಾವಿಯಿಂದ ನೀರನ್ನು ಸೇದಿಕೊಂಡು ದಾವೀದನಿಗೆ ತಂದುಕೊಟ್ಟರು. “ನಾನು ಈ ನೀರನ್ನು ಎಂದೆಂದಿಗೂ ಕುಡಿಯಬಾರದು. ಇದನ್ನು ಕುಡಿದರೆ, ತಮ್ಮ ಪ್ರಾಣಗಳನ್ನೇ ಪಣವಾಗಿಟ್ಟ ಈ ಮೂವರ ರಕ್ತವನ್ನು ಕುಡಿದಂತಾಗುವುದು,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೂಡಲೆ ಆ ಮೂರು ಮಂದಿ ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ ಬೇತ್ಲೆಹೇವಿುನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಆ ಮೂವರು ಪರಾಕ್ರಮಿಗಳು ಫಿಲಿಷ್ಟಿಯರ ಸೈನ್ಯದೊಂದಿಗೆ ಹೋರಾಡುತ್ತಾ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿದ್ದ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಯೆಹೋವನಿಗೆ ಸಮರ್ಪಿಸಿ ನೆಲದ ಮೇಲೆ ಹೊಯಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:18
9 ತಿಳಿವುಗಳ ಹೋಲಿಕೆ  

ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು.


ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.


ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.


ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.


ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.


“ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗಿ ಮಾಡಲಿ. ನಾನು ಈ ಮನುಷ್ಯರ ಪ್ರಾಣದ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣದಾಶೆ ತೊರೆದು ಈ ನೀರನ್ನು ತಂದರಲ್ಲಾ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು