1 ಪೂರ್ವಕಾಲ ವೃತ್ತಾಂತ 11:20 - ಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ಯೋವಾಬನ ಸಹೋದರನಾದ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೋವಾಬನ ಸಹೋದರ ಅಬ್ಷೈ ‘ಮೂವತ್ತು ಪ್ರಮುಖ ವೀರರು,’ ಎಂಬ ಪಡೆಯ ನಾಯಕನಾಗಿದ್ದನು . ಅವನು ತನ್ನ ಈಟಿಯಿಂದ ಮುನ್ನೂರು ಜನರಿಗೆ ವಿರೋಧವಾಗಿ ಹೋರಾಡಿ ಅವರನ್ನು ಕೊಂದುಹಾಕಿ ‘ಮೂವತ್ತು ಪ್ರಮುಖ ವೀರರು ‘ ಎಂಬ ಪಡೆಯಲ್ಲಿ ಪ್ರಖ್ಯಾತ ನಾದನು . ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೋವಾಬನ ತಮ್ಮನಾದ ಅಬ್ಷೈಯು [ಬೇರೆ] ಮೂರು ಮಂದಿಯಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಮಂದಿ ಪರಾಕ್ರಮಿಗಳ ನಾಯಕನಾಗಿದ್ದನು. ಆ ಮೂವರು ಪರಾಕ್ರಮಿಗಳಷ್ಟೇ ಇವನೂ ಪ್ರಖ್ಯಾತನಾಗಿದ್ದನು. ಅವನು ತನ್ನ ಬರ್ಜಿಯಿಂದ ಮುನ್ನೂರು ಮಂದಿಯೊಂದಿಗೆ ಯುದ್ಧಮಾಡಿ ಅವರನ್ನು ಹತಮಾಡಿದನು. ಅಧ್ಯಾಯವನ್ನು ನೋಡಿ |