Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:4 - ಕನ್ನಡ ಸಮಕಾಲಿಕ ಅನುವಾದ

4 ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಕಾಲದಲ್ಲಿ ಜೆರುಸಲೇಮ್ ಪಟ್ಟಣವನ್ನು ‘ಯೆಬೂಸ’ ಎಂದು ಕರೆಯಲಾಗುತ್ತಿತ್ತು. ಅಲ್ಲಿಯ ಮೂಲನಿವಾಸಿಗಳಾದ ಯೆಬೂಸಿಯರು ಆ ಪ್ರದೇಶದಲ್ಲಿ ಇನ್ನೂ ವಾಸಿಸುತ್ತಿದ್ದರು. ಅರಸ ದಾವೀದನೂ ಎಲ್ಲಾ ಇಸ್ರಯೇಲರೂ ಜೆರುಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಾವೀದನು ಇಸ್ರಾಯೇಲ್ಯರೆಲ್ಲರನ್ನೂ ಕರಕೊಂಡು ಯೆಬೂಸೆನಿಸಿಕೊಂಡಿದ್ದ ಯೆರೂಸಲೇವಿುಗೆ ವಿರೋಧವಾಗಿ ಹೊರಟನು. ಆ ಪ್ರಾಂತದ ಮೂಲನಿವಾಸಿಗಳು ಯೆಬೂಸಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನೂ ಎಲ್ಲಾ ಇಸ್ರೇಲರೂ ಜೆರುಸಲೇಮಿಗೆ ಹೊರಟರು. ಆ ಕಾಲದಲ್ಲಿ ಜೆರುಸಲೇಮನ್ನು ಯೆಬೂಸ್ ಎಂದು ಕರೆಯುತ್ತಿದ್ದರು. ಯಾಕೆಂದರೆ ಜೆರುಸಲೇಮ್ ಪಟ್ಟಣದಲ್ಲಿ ಯೆಬೂಸಿಯರು ವಾಸಿಸುತ್ತಿದ್ದರು. ಆ ಪಟ್ಟಣದಲ್ಲಿದ್ದ ಜನರು ದಾವೀದನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:4
10 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ.


ಆ ದೇಶದ ಮೂಲನಿವಾಸಿಗಳಾದ ಯೆಬೂಸಿಯರು ದಾವೀದನಿಗೆ, “ನೀನು ಇದರೊಳಗೆ ಬರಲು ಸಾಧ್ಯವಿಲ್ಲ,” ಎಂದರು. ಆದರೂ ದಾವೀದನು, ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.


ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.


ಅಲ್ಲಿಂದ ಯೆಬೂಸಿಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗನ್ನು ದಾಟಿ, ಉತ್ತರಕ್ಕಿರುವ ರೆಫಾಯಿಮ್ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕೆ ಬೆನ್ ಹಿನ್ನೋಮನ ತಗ್ಗಿನ ಮುಂದಿರುವ ಬೆಟ್ಟದ ಶಿಖರದವರೆಗೂ ಹೋಗುತ್ತದೆ.


ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ಹೇಳಿದರು.


ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯ, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ. ಇವೇ ಬೆನ್ಯಾಮೀನ್ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು