1 ಪೂರ್ವಕಾಲ ವೃತ್ತಾಂತ 11:6 - ಕನ್ನಡ ಸಮಕಾಲಿಕ ಅನುವಾದ6 “ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ, ಅವನು ನನ್ನ ದಳಪತಿಯಾಗುವನು,” ಎಂದು ದಾವೀದ ಪ್ರಕಟಿಸಿದ್ದನು. ಹಾಗೆಯೇ ಚೆರೂಯಳ ಮಗ ಯೋವಾಬನು ಮೊದಲು ಹೋಗಿ ದಳಪತಿಯಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು “ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು” ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ‘ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ ಅವನು ನನ್ನ ದಳಪತಿಯಾಗುವನು’ ಎಂದು ದಾವೀದ ಪ್ರಕಟಿಸಿದ್ದನು. ಜೆರೂಯಳ ಮಗ ಯೋವಾಬನು ಯುದ್ಧದಲ್ಲಿ ಮುಂದೆ ಹೋಗಿ ಸೇನಾಪತಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ದಿವಸ ದಾವೀದನು - ಯೆಬೂಸಿಯರನ್ನು ಯಾವನು ಮೊದಲು ಸೋಲಿಸುವನೋ ಅವನು ಪ್ರಮುಖನೂ ದಳಪತಿಯೂ ಆಗುವನು ಎಂದು ಹೇಳಲು ಚೆರೂಯಳ ಮಗನಾದ ಯೋವಾಬನು ಮೊದಲು ಹತ್ತಿದ್ದರಿಂದ ಅವನೇ ಪ್ರಮುಖನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಯೆಬೂಸಿಯರ ವಿರುದ್ಧವಾಗಿ ದಾಳಿಮಾಡಿ ಅವರನ್ನು ಸೋಲಿಸುವವನೇ ನನ್ನ ಸೇನಾಧಿಪತಿಯಾಗುವನು” ಎಂದು ದಾವೀದನು ಹೇಳಿದಾಗ ಚೆರೂಯಳ ಮಗನಾದ ಯೋವಾಬನು ಯೆಬೂಸಿಯರ ಮೇಲೆ ಯುದ್ಧಮಾಡಿ ಜಯಗಳಿಸಿದನು ಮತ್ತು ಇಸ್ರೇಲರ ಸೈನ್ಯಕ್ಕೆ ಅಧಿಪತಿಯಾದನು. ಅಧ್ಯಾಯವನ್ನು ನೋಡಿ |