Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:1 - ಕನ್ನಡ ಸಮಕಾಲಿಕ ಅನುವಾದ

1 ಕೀಷನ ಮಗ ಸೌಲನ ನಿಮಿತ್ತ ದಾವೀದನು ಇನ್ನೂ ಬಚ್ಚಿಟ್ಟುಕೊಂಡಿರುವಾಗ, ಚಿಕ್ಲಗಿನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ. ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ, ಯುದ್ಧಕ್ಕೆ ಸಹಾಯಕರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ಕೀಷನ ಮಗನಾದ ಸೌಲನಿಗೆ ಹೆದರಿ ಚಿಕ್ಲಗಿನಲ್ಲಿ ಅಡಗಿಕೊಂಡಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ಅರಸ ಸೌಲನಿಂದ ತಪ್ಪಿಸಿಕೊಂಡು ಚಿಕ್ಲಗ್ ಎಂಬಲ್ಲಿಗೆ ಹೋಗಿ ವಾಸಿಸಿದ್ದನು. ಅಲ್ಲಿ ಬೆನ್ಯಾಮೀನ್ ಗೋತ್ರದ ಅನೇಕ ಅನುಭವಶಾಲಿಗಳೂ ನಂಬಿಗಸ್ಥರೂ ಆದ ಸೈನಿಕರು ಬಂದು ಅವನನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ಕೀಷನ ಮಗನಾದ ಸೌಲನಿಗೆ ಹೆದರಿ ಚಿಕ್ಲಗಿನಲ್ಲಿ ಅಡಗಿಕೊಂಡಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ಚಿಕ್ಲಗಿನಲ್ಲಿದ್ದಾಗ ಕೆಲವು ಪರಾಕ್ರಮಶಾಲಿಗಳು ಬಂದು ದಾವೀದನೊಂದಿಗೆ ಸೇರಿಕೊಂಡರು. ಕೀಷನ ಮಗನಾದ ಸೌಲನಿಂದ ತಪ್ಪಿಸಿಕೊಳ್ಳಲು ದಾವೀದನು ಚಿಕ್ಲಗಿನಲ್ಲಿ ಅಡಗಿಕೊಂಡಿದ್ದನು. ಇವರು ಯುದ್ಧದಲ್ಲಿ ದಾವೀದನಿಗೆ ನೆರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:1
10 ತಿಳಿವುಗಳ ಹೋಲಿಕೆ  

“ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗಿ ಮಾಡಲಿ. ನಾನು ಈ ಮನುಷ್ಯರ ಪ್ರಾಣದ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣದಾಶೆ ತೊರೆದು ಈ ನೀರನ್ನು ತಂದರಲ್ಲಾ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.


ದಾವೀದನ ಬಳಿಯಲ್ಲಿದ್ದ ಮುಖ್ಯಸ್ಥರಾದ ಪರಾಕ್ರಮಶಾಲಿಗಳು ಇವರೇ. ಇಸ್ರಾಯೇಲನ್ನು ಕುರಿತು ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರ, ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮ ಸಂಪೂರ್ಣ ಸಹಾಯ ನೀಡಿದರು.


ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು.


ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು.


ಶುಭವರ್ತಮಾನವನ್ನು ತಂದವನು ನಾನು, ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡುವೆನೆಂದು ನೆನಸಿ ಒಬ್ಬನು ನನಗೆ, ‘ಇಗೋ, ಸೌಲನು ಮರಣಹೊಂದಿದನು,’ ಎಂದು ಹೇಳಿದ್ದರಿಂದ, ನಾನು ಚಿಕ್ಲಗಿನಲ್ಲಿ ಅವನಿಗೆ ಮರಣದಂಡನೆಯನ್ನು ವಿಧಿಸಿದೆನು.


ಸೌಲನ ಮರಣದ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ, ಚಿಕ್ಲಗಿಗೆ ತಿರುಗಿಬಂದು, ಎರಡು ದಿವಸ ಅಲ್ಲಿ ಇದ್ದ ತರುವಾಯ,


ಇದಲ್ಲದೆ ದಾವೀದನು ತನ್ನ ಸಂಗಡ ಇದ್ದ ಜನರನ್ನೂ, ಅವರವರ ಮನೆಯವರನ್ನೂ ಕರೆದುಕೊಂಡು ಹೋದನು. ಅವರು ಹೆಬ್ರೋನಿನ ಪಟ್ಟಣಗಳಲ್ಲಿ ವಾಸವಾಗಿದ್ದರು.


ಎಲೀಯೇಲ್; ಓಬೇದ್; ಮೆಚೊಬಾಯದವನಾದ ಯಾಸೀಯೇಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು