Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:16 - ಕನ್ನಡ ಸಮಕಾಲಿಕ ಅನುವಾದ

16 ಬೆನ್ಯಾಮೀನನ ಮತ್ತು ಯೆಹೂದ್ಯರಲ್ಲಿ ಕೆಲವರು ಕೋಟೆಯ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೆನ್ಯಾಮೀನ್ ಮತ್ತು ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೆದುರಿಗೆ ನಿಂತು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಮ್ಮೆ ಬೆನ್ಯಾಮೀನ್ ಹಾಗು ಯೂದ ಗೋತ್ರದ ಜನರ ಒಂದು ಗುಂಪು ದಾವೀದನು ವಾಸವಾಗಿದ್ದ ಕೋಟೆಯಬಳಿಗೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 [ಒಂದಾನೊಂದು ದಿವಸ] ಬೆನ್ಯಾಮೀನ್ ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೆದುರಿಗೆ ನಿಂತು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬೆನ್ಯಾಮೀನ್ ಮತ್ತು ಯೆಹೂದ ಕುಲದ ಇತರ ಜನರೂ ದಾವೀದನು ಕೋಟೆಯಲ್ಲಿ ದಾವೀದನೊಂದಿಗೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:16
8 ತಿಳಿವುಗಳ ಹೋಲಿಕೆ  

ಆಗ ಸೌಲನು ಸುತ್ತಲು ನಿಂತಿದ್ದ ಸೇವಕರಿಗೆ, “ಬೆನ್ಯಾಮೀನನ ಮಕ್ಕಳೇ, ಕೇಳಿರಿ. ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡೆಸುವಂತೆ ಇಷಯನ ಮಗನು ನಿಮ್ಮೆಲ್ಲರಿಗೆ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನು ಸಾವಿರಕ್ಕೆ ನಾಯಕರಾಗಿಯೂ, ನೂರಕ್ಕೆ ನಾಯಕರಾಗಿಯೂ ಮಾಡುವನೋ?


ಇವರು ಮೊದಲನೆಯ ತಿಂಗಳಲ್ಲಿ ಯೊರ್ದನ್ ಹೊಳೆ ದಡಮೀರಿ ಹರಿಯುತ್ತಿದ್ದಾಗ, ಅದನ್ನು ದಾಟಿ ಪೂರ್ವ ಕಡೆಯಲ್ಲಿಯೂ, ಪಶ್ಚಿಮ ಕಡೆಯಲ್ಲಿಯೂ ತಗ್ಗುಗಳಲ್ಲಿ ಇರುವವರೆಲ್ಲರನ್ನು ಓಡಿಸಿಬಿಟ್ಟರು.


ಆಗ ದಾವೀದನು ಅವರನ್ನು ಎದುರುಗೊಳ್ಳಲು ಹೊರಟುಹೋಗಿ ಅವರಿಗೆ ಉತ್ತರವಾಗಿ, “ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ, ನನ್ನ ಹೃದಯವು ನಿಮ್ಮ ಸಂಗಡ ಒಂದಾಗಿರುವುದು. ಆದರೆ ದೋಷವು ನನ್ನ ಕೈಯಲ್ಲಿ ಇಲ್ಲದಿರುವಾಗ, ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ, ನಮ್ಮ ಪಿತೃಗಳ ದೇವರು ನೋಡಿ ನ್ಯಾಯತೀರಿಸಲಿ,” ಎಂದನು.


ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ,


ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ, ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.


ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.


ಇದಲ್ಲದೆ ಮರುಭೂಮಿಯಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ, ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು. ಅವರ ಮುಖಗಳು ಸಿಂಹಗಳಂತೆ ಭೀಕರವಾಗಿದ್ದವು. ಪರ್ವತಗಳ ಮೇಲೆ ಇವರು ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.


ಬೆನ್ಯಾಮೀನನ ಚಿಕ್ಕ ಗೋತ್ರವು ಅವರನ್ನು ನಡೆಸುವುದು. ಯೆಹೂದದ ಪ್ರಧಾನರೂ, ಜೆಬುಲೂನನ ಪ್ರಧಾನರೂ ನಫ್ತಾಲಿಯ ಪ್ರಧಾನರೂ ಅಲ್ಲಿ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು