Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:17 - ಕನ್ನಡ ಸಮಕಾಲಿಕ ಅನುವಾದ

17 ಆಗ ದಾವೀದನು ಅವರನ್ನು ಎದುರುಗೊಳ್ಳಲು ಹೊರಟುಹೋಗಿ ಅವರಿಗೆ ಉತ್ತರವಾಗಿ, “ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ, ನನ್ನ ಹೃದಯವು ನಿಮ್ಮ ಸಂಗಡ ಒಂದಾಗಿರುವುದು. ಆದರೆ ದೋಷವು ನನ್ನ ಕೈಯಲ್ಲಿ ಇಲ್ಲದಿರುವಾಗ, ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ, ನಮ್ಮ ಪಿತೃಗಳ ದೇವರು ನೋಡಿ ನ್ಯಾಯತೀರಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದಾವೀದನು ಅವರನ್ನು ಎದುರುಗೊಂಡು “ಸ್ನೇಹಿತರಂತೆ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮಗೆ ಇಲ್ಲಿ ಸ್ವಾಗತ. ನಮ್ಮೊಂದಿಗೆ ಸೇರಿಕೊಳ್ಳಿ, ನಾನು ನಿಮಗೆ ಯಾವ ತೊಂದರೆಯನ್ನು ಕೊಟ್ಟಿಲ್ಲ. ಆದರೆ ನೀವು ನನ್ನನ್ನು ನನ್ನ ವೈರಿಗಳಿಗೆ ಹಿಡಿದುಕೊಡಲು ಬಂದಿದ್ದರೆ ನಮ್ಮ ಪಿತೃಗಳ ದೇವರು ಅದನ್ನು ಬಲ್ಲವರಾಗಿದ್ದು ನಿಮ್ಮನ್ನು ದಂಡಿಸುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀವು ಸ್ನೇಹಭಾವದಿಂದ ಸಹಾಯಮಾಡುವದಕ್ಕಾಗಿ ನನ್ನ ಬಳಿಗೆ ಬಂದಿರುವದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವದು; ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವದಾದರೆ ನಮ್ಮ ಪಿತೃಗಳ ದೇವರು ನಿಮ್ಮನ್ನು ನೋಡಿ ದಂಡಿಸಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರನ್ನು ಎದುರುಗೊಳ್ಳಲು ದಾವೀದನು ಹೊರಬಂದು, “ನೀವು ಸಮಾಧಾನದಿಂದ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮ್ಮನ್ನು ಸ್ವಾಗತಿಸುತ್ತೇನೆ. ಆದರೆ ನೀವು ನನ್ನ ಮೇಲೆ ಹೊಂಚುಹಾಕಲು ಬಂದಿರುವುದಾದರೆ ನಾನು ನಿರಪರಾಧಿಯಾಗಿರುವ ಕಾರಣ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ಶಿಕ್ಷಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:17
24 ತಿಳಿವುಗಳ ಹೋಲಿಕೆ  

ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.


ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.


ಆಗ ಯೆಹೋವ ದೇವರ ದೂತನು ಸೈತಾನನಿಗೆ, “ಸೈತಾನನೇ, ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಯೆರೂಸಲೇಮನ್ನು ಆಯ್ದುಕೊಂಡ ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಅದು ಬೆಂಕಿಯೊಳಗಿಂದ ಎಳೆದ ಕೊಳ್ಳಿಯಾಗಿದೆಯಲ್ಲವೋ?” ಎಂದನು.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ. ಆಗ, ನಿಮ್ಮ ಸತ್ಯದಲ್ಲಿ ನಡೆದುಕೊಳ್ಳುವೆನು; ನಿಮ್ಮ ಹೆಸರಿಗೆ ಭಯಪಡುವಂತೆ ನನಗೆ ವಿಭಾಗವಿಲ್ಲದೆ ಹೃದಯವನ್ನು ದಯಪಾಲಿಸಿರಿ.


ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ.


ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ,


ಯೋರಾಮನು ಯೇಹುವನ್ನು ಕಂಡಾಗ, “ಯೇಹುವೇ, ಸಮಾಧಾನದಿಂದ ಬಂದಿರುವೆಯೋ?” ಎಂದನು. ಅದಕ್ಕವನು, “ನಿನ್ನ ತಾಯಿಯಾದ ಈಜೆಬೆಲಳ ಜಾರತ್ವವೂ, ಅವಳ ಮಾಟಮಂತ್ರಗಳೂ ಅಧಿಕವಾಗಿರುವಾಗ ಸಮಾಧಾನವೆಲ್ಲಿ?” ಎಂದನು.


ಆದರೆ ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಬತ್ಷೆಬೆಳು ಅವನಿಗೆ, “ಸಮಾಧಾನವಾಗಿ ಬರುತ್ತೀಯೋ?” ಎಂದಳು. ಅದಕ್ಕೆ ಅವನು, “ಸಮಾಧಾನವೇ,” ಎಂದನು.


ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು.


ದಾವೀದನು ಸೌಲನ ಸಂಗಡ ಮಾತನಾಡಿ ಮುಗಿಸಿದ ಮೇಲೆ, ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.


ಯೆಹೋವ ದೇವರು ಹೇಳಿದ ಪ್ರಕಾರ ಸಮುಯೇಲನು ಮಾಡಿ, ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ, ಅವನಿಗೆ, “ಸಮಾಧಾನವಾಗಿ ಬಂದೆಯೋ?” ಎಂದರು.


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.


ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.


ಬೆನ್ಯಾಮೀನನ ಮತ್ತು ಯೆಹೂದ್ಯರಲ್ಲಿ ಕೆಲವರು ಕೋಟೆಯ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.


ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು