Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:18 - ಕನ್ನಡ ಸಮಕಾಲಿಕ ಅನುವಾದ

18 ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:18
31 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.


ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.


ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯಾಗಿ ಇಟ್ಟಿದ್ದನು. ಈ ಅಮಾಸನು ಇಸ್ರಾಯೇಲನಾದ ಇತ್ರನ ಮಗನು. ಈ ಇತ್ರನು ನಾಹಾಷನ ಮಗಳೂ, ಯೋವಾಬನ ತಾಯಿಯೂ, ಚೆರೂಯಳ ಸಹೋದರಿಯೂ ಆದ ಅಬೀಗೈಲಳನ್ನು ಮದುವೆಯಾಗಿದ್ದನು.


ಅದಕ್ಕೆ ರೂತಳು, “ನಿಮ್ಮನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡಿರಿ. ಏಕೆಂದರೆ ನೀವು ಎಲ್ಲಿ ಹೋಗುವಿರೋ ನಾನು ಅಲ್ಲಿಗೇ ಬರುವೆನು. ನೀವು ಎಲ್ಲಿ ಇಳುಕೊಳ್ಳುವಿರೋ ನಾನು ಅಲ್ಲಿ ಇಳುಕೊಳ್ಳುವೆನು. ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು.


ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆಯೂ ದೇವರ ಇಸ್ರಾಯೇಲಿನ ಸಮಾಧಾನ ಹಾಗೂ ಕರುಣೆ ಇರಲಿ.


“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.


ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು.


ಆಗ ಅರಮನೆಯ ಆಡಳಿತಾಧಿಕಾರಿ, ಪಟ್ಟಣದ ರಾಜ್ಯಪಾಲರು, ಹಿರಿಯರು ಮತ್ತು ಪಾಲಕರು ಈ ಸಂದೇಶವನ್ನು ಯೇಹುವಿನ ಬಳಿಗೆ ಕಳುಹಿಸಿ, “ನಾವು ನಿಮ್ಮ ಸೇವಕರು ನೀವು ನಮಗೆ ಹೇಳುವುದನ್ನೆಲ್ಲಾ ಮಾಡುತ್ತೇವೆ. ನಾವು ಯಾರನ್ನೂ ಅರಸನನ್ನಾಗಿ ನೇಮಿಸುವುದಿಲ್ಲ. ನಿಮ್ಮ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನೀವು ಮಾಡಿರಿ,” ಎಂದರು.


ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.


ಆದರೆ ಸೊಲೊಮೋನನು ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಅವರು ಯುದ್ಧಭಟರಾಗಿಯೂ, ಅವನ ಅಧಿಪತಿಯಾಗಿಯೂ, ತನ್ನ ಕೈಕೆಳಗಿರುವ ಅವನ ಪ್ರಧಾನರಾಗಿಯೂ, ಅಧಿಕಾರಿಗಳಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇದ್ದರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.


ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.


ಆದರೆ ಇತ್ತೈಯೂ ಅರಸನಿಗೆ ಉತ್ತರವಾಗಿ, “ಯೆಹೋವ ದೇವರ ಜೀವದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ, ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ, ಸಾವಾದರೂ ಬದುಕಾದರೂ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು,” ಎಂದನು.


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು.


ಆಗ ಸೌಲನು ಸುತ್ತಲು ನಿಂತಿದ್ದ ಸೇವಕರಿಗೆ, “ಬೆನ್ಯಾಮೀನನ ಮಕ್ಕಳೇ, ಕೇಳಿರಿ. ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡೆಸುವಂತೆ ಇಷಯನ ಮಗನು ನಿಮ್ಮೆಲ್ಲರಿಗೆ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನು ಸಾವಿರಕ್ಕೆ ನಾಯಕರಾಗಿಯೂ, ನೂರಕ್ಕೆ ನಾಯಕರಾಗಿಯೂ ಮಾಡುವನೋ?


ಅವನು ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿಗಳಾಗಿಯೂ, ತನ್ನ ಭೂಮಿಯನ್ನು ಊಳುವವರಾಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ಹಾಗು ತನ್ನ ರಥಸಾಮಗ್ರಿಗಳನ್ನು ಮಾಡುವವರಾಗಿಯೂ ನೇಮಿಸುವನು.


ಇದಲ್ಲದೆ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಯೆಹೋವ ದೇವರ ಆತ್ಮರು ಆಗಾಗ್ಗೆ ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿದರು.


ಯೆಹೋವ ದೇವರು ಹೇಳಿದ ಪ್ರಕಾರ ಸಮುಯೇಲನು ಮಾಡಿ, ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ, ಅವನಿಗೆ, “ಸಮಾಧಾನವಾಗಿ ಬಂದೆಯೋ?” ಎಂದರು.


ದಾವೀದನ ಪರಾಕ್ರಮಶಾಲಿಗಳ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು. ಇವನು ತನ್ನ ಈಟಿಯಿಂದ ಮುನ್ನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು.


ಆಗ ದಾವೀದನು ಅವರನ್ನು ಎದುರುಗೊಳ್ಳಲು ಹೊರಟುಹೋಗಿ ಅವರಿಗೆ ಉತ್ತರವಾಗಿ, “ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ, ನನ್ನ ಹೃದಯವು ನಿಮ್ಮ ಸಂಗಡ ಒಂದಾಗಿರುವುದು. ಆದರೆ ದೋಷವು ನನ್ನ ಕೈಯಲ್ಲಿ ಇಲ್ಲದಿರುವಾಗ, ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ, ನಮ್ಮ ಪಿತೃಗಳ ದೇವರು ನೋಡಿ ನ್ಯಾಯತೀರಿಸಲಿ,” ಎಂದನು.


ಅದಕ್ಕವನು, “ಸಮಾಧಾನವೇ, ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನನ್ನ ಸಂಗಡ ಯಜ್ಞಮಾಡುವುದಕ್ಕೆ ಬನ್ನಿರಿ,” ಎಂದನು. ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧಮಾಡಿ, ಅವರನ್ನು ಯಜ್ಞಮಾಡುವುದಕ್ಕೆ ಕರೆದನು.


ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ.


ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ, ‘ದುಷ್ಟರಿಂದ ದುಷ್ಟತ್ವವು ಹುಟ್ಟುವುದು’ ಆದರೂ ನಾನು ನಿನಗೆ ವಿರೋಧವಾಗಿ ನನ್ನ ಕೈ ಮುಟ್ಟುವುದಿಲ್ಲ.


ದಾವೀದನ ಮಾತುಗಳು ಮುಗಿದ ನಂತರ, ಸೌಲನು ದಾವೀದನಿಗೆ, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು.


ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು