Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:30 - ಕನ್ನಡ ಸಮಕಾಲಿಕ ಅನುವಾದ

30 ಎಫ್ರಾಯೀಮನ ಮಕ್ಕಳಲ್ಲಿ 20,800 ಮಂದಿ, ಬಲವುಳ್ಳ ಪರಾಕ್ರಮಶಾಲಿಗಳೂ, ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಎಫ್ರಾಯೀಮಿನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟುನೂರು ಮಹಾಯುದ್ಧವೀರರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಎಫ್ರಯಿಮ್ ಗೋತ್ರದಿಂದ: 20,800 ಮಹಾರಣವೀರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಎಫ್ರಾಯೀವಿುನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟು ನೂರು ಮಂದಿ ಮಹಾರಣವೀರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಎಫ್ರಾಯೀಮ್ ಕುಲದಿಂದ ಇಪ್ಪತ್ತು ಸಾವಿರದ ಎಂಟನೂರು ಮಂದಿ ಇದ್ದರು. ಇವರೆಲ್ಲರೂ ಧೈರ್ಯಶಾಲಿ ಸೈನಿಕರು ಮತ್ತು ತಮ್ಮ ಕುಲದವರಿಗೆ ನಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:30
6 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಭೂಮಿಯ ಮೇಲೆ ನೆಫೀಲಿಯೆಂಬ ರಾಕ್ಷಸ ವಂಶದವರು ಇದ್ದರು. ನಂತರದಲ್ಲಿಯೂ ಇದ್ದರು. ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಕೂಡಿದಾಗ, ಮಕ್ಕಳು ಹುಟ್ಟಿದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಿಗಳು.


ಸೌಲನ ಸಹೋದರರಾಗಿರುವ ಬೆನ್ಯಾಮೀನನ ಮಕ್ಕಳಲ್ಲಿ 3,000 ಮಂದಿ. ಇಂದಿನವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.


ಮನಸ್ಸೆಯ ಅರ್ಧಗೋತ್ರದಲ್ಲಿ 18,000 ಮಂದಿ. ಅವರು ದಾವೀದನನ್ನು ಅರಸನಾಗಿ ಮಾಡಲು ಬಂದವರ ಹೆಸರು ಹೆಸರಾಗಿ ಹೇಳಲು ಆಯ್ಕೆಯಾದವರು.


ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು.


ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.


ಇದಲ್ಲದೆ ಅಬ್ನೇರನು ಬೆನ್ಯಾಮೀನ್ಯರ ಸಂಗಡ ಮಾತನಾಡಿದನು. ಅಬ್ನೇರನು ಇಸ್ರಾಯೇಲರ ದೃಷ್ಟಿಗೂ ಬೆನ್ಯಾಮೀನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೆಯದಾಗಿ ತೋರಿದ್ದನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ಹೆಬ್ರೋನಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು