Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:38 - ಕನ್ನಡ ಸಮಕಾಲಿಕ ಅನುವಾದ

38 ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲರ ಮೇಲೆ ಅರಸನಾಗಿ ಮಾಡಲು ಹೆಬ್ರೋನಿಗೆ ಪೂರ್ಣಮನಸ್ಸಿನಿಂದ ಬಂದರು. ಇದಲ್ಲದೆ ಇಸ್ರಾಯೇಲಿನಲ್ಲಿದ್ದ ಮಿಕ್ಕಾದವರೆಲ್ಲರು ದಾವೀದನನ್ನು ಅರಸನಾಗಿ ಮಾಡಲು ಒಂದೇ ಮನಸ್ಸುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯುದ್ಧಸನ್ನದ್ಧರಾದ ಈ ಎಲ್ಲಾ ಸೈನಿಕರು ಸಮಸ್ತ ಇಸ್ರಯೇಲರ ಮೇಲೆ ದಾವೀದನನ್ನು ಅರಸನನ್ನಾಗಿ ಮಾಡಲು ದೃಢನಿರ್ಧಾರ ಮಾಡಿಕೊಂಡು ಹೆಬ್ರೋನಿಗೆ ಹೋದರು. ಇಸ್ರಯೇಲರಲ್ಲಿ ಉಳಿದವರೆಲ್ಲರೂ ಇದೇ ಉದ್ದೇಶದಿಂದ ಒಂದಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ದಾವೀದನನ್ನು ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡುವದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲ್ಯರು ದಾವೀದನಿಗೆ ರಾಜ್ಯಾಭಿಷೇಕ ಮಾಡುವದರಲ್ಲಿ ಏಕಮನಸ್ಸುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಇವರೆಲ್ಲರೂ ಧೈರ್ಯಶಾಲಿ ಯೋಧರಾಗಿದ್ದರು. ಇವರೆಲ್ಲಾ ದಾವೀದನನ್ನು ಅರಸನನ್ನಾಗಿ ಮಾಡುವ ಉದ್ದೇಶದಿಂದ ಹೆಬ್ರೋನಿಗೆ ಬಂದರು. ದಾವೀದನು ತಮ್ಮ ಅರಸನಾಗುವುದಕ್ಕೆ ಇಸ್ರೇಲಿನ ಬೇರೆ ಜನರೆಲ್ಲರೂ ಒಪ್ಪಿಗೆಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:38
13 ತಿಳಿವುಗಳ ಹೋಲಿಕೆ  

ಇಂದಿನ ಹಾಗೆಯೇ ಅವರ ಕಟ್ಟಳೆಗಳಲ್ಲಿ ನಡೆಯಲೂ, ಅವರ ಆಜ್ಞೆಗಳನ್ನು ಕೈಗೊಳ್ಳಲೂ, ನಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಹೃದಯಗಳು ಪೂರ್ಣವಾಗಿ ಒಪ್ಪಿಸಿಕೊಟ್ಟದ್ದಾಗಿರಲಿ,” ಎಂದನು.


ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಜೆಬುಲೂನನವರಲ್ಲಿ ದೃಢಹೃದಯದಿಂದ ಸಾಲಾಗಿ ನಡೆಯುವ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರಾದ ಸೈನ್ಯವಾಗಿ ಹೊರಡುವವರು 50,000 ಮಂದಿ.


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.


ಯೊರ್ದನ್ ನದಿ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ, ಗಾದ್ಯರಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು 1,20,000 ಮಂದಿ.


ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಅವರ ಕುಟುಂಬದವರು ಅವರಿಗೋಸ್ಕರ ಸಿದ್ಧಮಾಡಿದ ಆಹಾರವನ್ನು ತಿನ್ನುತ್ತಾ, ಕುಡಿಯುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು