Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:39 - ಕನ್ನಡ ಸಮಕಾಲಿಕ ಅನುವಾದ

39 ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಅವರ ಕುಟುಂಬದವರು ಅವರಿಗೋಸ್ಕರ ಸಿದ್ಧಮಾಡಿದ ಆಹಾರವನ್ನು ತಿನ್ನುತ್ತಾ, ಕುಡಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವರುದಾವೀದನೊಂದಿಗೆ, ತಮ್ಮ ಸಹಬಾಂಧವರು ಸಿದ್ಧಪಡಿಸಿದ ಆಹಾರ ಪಾನೀಯಗಳನ್ನು ಸೇವಿಸುತ್ತಾ, ಮೂರು ದಿನಗಳನ್ನು ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ಅಲ್ಲಿ ಮೂರು ದಿವಸ ದಾವೀದನ ಸಂಗಡ ಇದ್ದು ಅನ್ನಪಾನಗಳನ್ನು ತೆಗೆದುಕೊಂಡರು; ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ ಆಹಾರವನ್ನು ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:39
8 ತಿಳಿವುಗಳ ಹೋಲಿಕೆ  

ಆಗ ಯೆಹೂದದವರೆಲ್ಲರೂ ಇಸ್ರಾಯೇಲರಿಗೆ ಉತ್ತರವಾಗಿ, “ಅರಸನು ನಮಗೆ ಸಮೀಪ ಬಂಧುವಾದುದರಿಂದ, ಈ ಕಾರ್ಯಕ್ಕೋಸ್ಕರ ನೀವು ಕೋಪಗೊಂಡಿರುವುದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ನಾವು ನಮಗಾಗಿ ಏನನ್ನಾದರೂ ತೆಗೆದುಕೊಂಡಿದ್ದೇವೆಯೇ?” ಎಂದರು.


ನೆರೆದುಬಂದ ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ತಿಂದು ಕುಡಿದರು.


ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲರ ಮೇಲೆ ಅರಸನಾಗಿ ಮಾಡಲು ಹೆಬ್ರೋನಿಗೆ ಪೂರ್ಣಮನಸ್ಸಿನಿಂದ ಬಂದರು. ಇದಲ್ಲದೆ ಇಸ್ರಾಯೇಲಿನಲ್ಲಿದ್ದ ಮಿಕ್ಕಾದವರೆಲ್ಲರು ದಾವೀದನನ್ನು ಅರಸನಾಗಿ ಮಾಡಲು ಒಂದೇ ಮನಸ್ಸುಳ್ಳವರಾಗಿದ್ದರು.


ಇದಲ್ಲದೆ ಅವರ ನೆರೆಯವನಾದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ತಮ್ಮ ಎತ್ತು, ಕತ್ತೆ, ಹೇಸರಗತ್ತೆ ಮತ್ತು ಒಂಟೆಗಳ ಮೇಲೆಯೂ ರೊಟ್ಟಿಗಳನ್ನೂ ಆಹಾರವನ್ನೂ, ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ದನಕುರಿಗಳನ್ನೂ ಬಹಳವಾಗಿ ತಂದರು. ಇಸ್ರಾಯೇಲಿನಲ್ಲಿ ಸಂತೋಷವಿತ್ತು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ದಾವೀದನ ಬಳಿಯಲ್ಲಿದ್ದ ಮುಖ್ಯಸ್ಥರಾದ ಪರಾಕ್ರಮಶಾಲಿಗಳು ಇವರೇ. ಇಸ್ರಾಯೇಲನ್ನು ಕುರಿತು ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರ, ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮ ಸಂಪೂರ್ಣ ಸಹಾಯ ನೀಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು