Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಸ್ಥಳಕ್ಕೆ ಅಂದಿನಿಂದ ‘ಪೆರೆಚ್ ಉಜ್ಜ’ ಎಂಬ ಹೆಸರು ಬಂತು. ಸರ್ವೇಶ್ವರ ಕೋಪದಿಂದ ಉಜ್ಜನನ್ನು ಶಿಕ್ಷಿಸಿದ್ದಕ್ಕಾಗಿ ದಾವೀದನು ಭಯದಿಂದ ಕಂಗೆಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಉಜ್ಜನನ್ನು ಮುರಿದುಬಿಟ್ಟದ್ದರಿಂದ ದಾವೀದನು ಉರಿಗೊಂಡು ಆ ಸ್ಥಳಕ್ಕೆ ಪೆರೆಚ್ಉಜ್ಜ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದನು ಇದನ್ನು ನೋಡಿ ತುಂಬಾ ಬೇಸರಗೊಂಡನು. ಆ ಸಮಯದಿಂದ ಈ ತನಕವೂ ಆ ಸ್ಥಳಕ್ಕೆ, “ಪೆರೆಚ್‌ಉಜ್ಜ” ಎಂಬ ಹೆಸರೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:11
11 ತಿಳಿವುಗಳ ಹೋಲಿಕೆ  

ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.


ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು.


ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ಯೆಹೋವ ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು.


ಆಗ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು, ಅಂಥ ಅಗೌರವಕ್ಕಾಗಿ ದೇವರು ಅವನನ್ನು ಶಿಕ್ಷಿಸಿದರು; ಅವನು ಅಲ್ಲಿಯೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.


ಯೆಹೋಶುವನು ಯೊರ್ದನ್ ನದಿ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ಇಟ್ಟ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದವರೆಗೂ ಅಲ್ಲಿಯೇ ಇವೆ.


ದೇವರು ಅವನನ್ನು ಮೋವಾಬಿನ ದೇಶದ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೂಣಿಟ್ಟರು. ಆದರೆ ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ಗೊತ್ತಿಲ್ಲ.


ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲರು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದವರೆಗೂ ತಿನ್ನುವುದಿಲ್ಲ.


ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸಿದರು. ಅವನು ಅಲ್ಲಿಯೇ ದೇವರ ಮುಂದೆ ಮರಣಹೊಂದಿದನು.


ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು.


ಯೆಹೋವ ದೇವರ ಸಮೀಪಕ್ಕೆ ಬರುವ ಯಾಜಕರು ಸಹ ಯೆಹೋವ ದೇವರು ಅವರನ್ನು ಸಾಯಿಸದಂತೆ ತಮ್ಮನ್ನು ಶುದ್ಧಿಮಾಡಿಕೊಳ್ಳಲಿ, ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದರು.


ಏಕೆಂದರೆ ನೀವು ಮೊದಲು ಹಾಗೆ ಮಾಡದೆ ಇದ್ದುದರಿಂದ, ಕೋಪದಿಂದ ಯೆಹೋವ ದೇವರಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದರು. ಏಕೆಂದರೆ ನ್ಯಾಯದ ಪ್ರಕಾರ ನಾವು ಅವರನ್ನು ಹುಡುಕಲಿಲ್ಲ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು