Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:5 - ಕನ್ನಡ ಸಮಕಾಲಿಕ ಅನುವಾದ

5 ಹೀಗೆ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತರುವುದಕ್ಕೆ ದಾವೀದನು ಈಜಿಪ್ಟಿನ ಶೀಹೋರ್ ನದಿ ಮೊದಲ್ಗೊಂಡು ಲಿಬೋ ಹಮಾತಿನ ಪ್ರದೇಶದವರೆಗೆ ಇರುವ ಸಮಸ್ತ ಇಸ್ರಾಯೇಲರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೀಗೆ ಅರಸ ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ದೇವಮಂಜೂಷವನ್ನು ತರಲು ದೇಶದ ಎಲ್ಲಾ ಕಡೆಗಳಿಂದಲೂ, ದಕ್ಷಿಣದ ಈಜಿಪ್ಟ್ ಗಡಿಯಿಂದ ಉತ್ತರದ ಹಾಮಾತ್ ಕಣಿವೆಯವರೆಗಿನ ಜನರನ್ನು ಒಂದುಗೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ದಾವೀದನು ದೇವಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತರುವದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯವರೆಗೂ ವಾಸಿಸುತ್ತಿದ್ದ ಎಲ್ಲಾ ಇಸ್ರಾಯೇಲ್ಯರನ್ನೂ ಕೂಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:5
16 ತಿಳಿವುಗಳ ಹೋಲಿಕೆ  

ಅವರು ಕಿರ್ಯತ್ ಯಾರೀಮಿನ ನಿವಾಸಿಗಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವ ದೇವರ ಮಂಜೂಷವನ್ನು ತಿರುಗಿ ಕಳುಹಿಸಿದ್ದಾರೆ, ನೀವು ಬಂದು ಅದನ್ನು ನಿಮ್ಮ ಬಳಿಗೆ ತೆಗೆದುಕೊಂಡು ಹೋಗಿರಿ,” ಎಂದು ಹೇಳಿದರು.


ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.


ದಾವೀದನು ಇಸ್ರಾಯೇಲಿನಲ್ಲಿ ಆರಿಸಿದ ಮೂವತ್ತು ಸಾವಿರ ಸೈನಿಕರನ್ನು ಕೂಡಿಸಿಕೊಂಡು,


ದಾವೀದನು ಯೆಹೋವ ದೇವರ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತೆಗೆದುಕೊಂಡು ಬರುವ ನಿಮಿತ್ತ, ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲರನ್ನು ಕೂಡಿಸಿ ಬರಮಾಡಿದನು.


ಆಗ ಕೆರೂಬಿಗಳ ನಡುವೆ ವಾಸವಾಗಿರುವ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು, ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಹೂದಕ್ಕೆ ಸೇರಿದ ಕಿರ್ಯತ್ ಯಾರೀಮಿನ ಬಾಲಾ ಎಂಬಲ್ಲಿಗೆ ಹೋದರು.


ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ?


ಆಗ ಇಸ್ರಾಯೇಲರು ಪ್ರಯಾಣ ಮಾಡುವಾಗ ಮೂರನೆಯ ದಿವಸದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ ಯಾರೀಮ್ ಎಂಬ ಅವರ ಪಟ್ಟಣಗಳಿಗೆ ಬಂದರು.


ಕಿರ್ಯತ್ ಯಾರೀಮಿನವರು ಬಂದು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡು, ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟರು. ಅವನ ಪುತ್ರನಾದ ಎಲಿಯಾಜರನನ್ನು ಯೆಹೋವ ದೇವರ ಮಂಜೂಷವನ್ನು ಕಾಯಲು ಪ್ರತಿಷ್ಠಿಸಿದರು.


ಹಾಗೆಯೇ ಮಾಡೋಣ ಎಂದು ಕೂಟದವರೆಲ್ಲರೂ ಹೇಳಿದರು. ಏಕೆಂದರೆ ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.


ಪ್ರವಾಹದಿಂದ ಶೀಹೋರಿನ ಧಾನ್ಯವೂ, ನೈಲ್ ನದಿಯ ಸುಗ್ಗಿಯೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.


ಮಂಜೂಷವು ಕಿರ್ಯತ್ ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರ್ಷಗಳಾದವು. ಆಗ, ಇಸ್ರಾಯೇಲ್ ಮನೆತನದವರೆಲ್ಲರು ಯೆಹೋವ ದೇವರಿಗೋಸ್ಕರ ಹಂಬಲಿಸಿ ಗೋಳಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು