1 ಪೂರ್ವಕಾಲ ವೃತ್ತಾಂತ 13:6 - ಕನ್ನಡ ಸಮಕಾಲಿಕ ಅನುವಾದ6 ಆಗ ಕೆರೂಬಿಗಳ ನಡುವೆ ವಾಸವಾಗಿರುವ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು, ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಹೂದಕ್ಕೆ ಸೇರಿದ ಕಿರ್ಯತ್ ಯಾರೀಮಿನ ಬಾಲಾ ಎಂಬಲ್ಲಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಎಲ್ಲಾ ಇಸ್ರಾಯೇಲ್ಯರನ್ನು ಒಟ್ಟಿಗೆ ಸೇರಿಸಿ ಅವರೆಲ್ಲರೊಡನೆ, ಯೆಹೂದ ದೇಶದ ಬಾಳಾ ಎನ್ನಿಸಿಕೊಳ್ಳುತ್ತಿದ್ದ ಕಿರ್ಯತ್ಯಾರೀಮಿಗೆ ಹೋದನು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನನಾಗಿರುವ ಯೆಹೋವ ದೇವರ ನಾಮದಿಂದ ಪ್ರಸಿದ್ಧವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದಾವೀದನೂ ಜನರೂ ಜುದೇಯದಲ್ಲಿ ‘ಬಾಳಾ’ ಎಂದು ಹೆಸರುಗೊಂಡಿದ್ದ ಕಿರ್ಯತ್ಯಾರೀಮ ಪಟ್ಟಣಕ್ಕೆ ಮಂಜೂಷವನ್ನು ತರಲು ಹೋದರು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನರಾಗಿರುವ ಸರ್ವೇಶ ದೇವರ ನಾಮದಿಂದ ಸುಪ್ರಸಿದ್ಧವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರೆಲ್ಲರೊಡನೆ ಯೆಹೂದ ದೇಶದ ಬಾಳಾ ಎನಿಸಿಕೊಳ್ಳುತ್ತಿದ್ದ ಕಿರ್ಯತ್ಯಾರೀವಿುಗೆ ಹೋದನು; ಆ ಮಂಜೂಷವು ಕೆರೂಬಿಯರ ನಡುವೆ ಆಸೀನನಾಗಿರುವ ಯೆಹೋವದೇವರ ನಾಮದಿಂದ ಪ್ರಸಿದ್ಧವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇಸ್ರೇಲಿನ ಎಲ್ಲಾ ಜನರು ದಾವೀದನೊಂದಿಗೆ ಯೆಹೂದದ ಬಾಳಾ ಎಂಬ ಸ್ಥಳಕ್ಕೆ (ಕೀರ್ಯಾತ್ಯಾರೀಮಿನ ಇನ್ನೊಂದು ಹೆಸರು ಬಾಳಾ.) ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ನಡೆದರು. ಆತನು ಕೆರೂಬಿಗಳ ನಡುವೆ ಆಸೀನನಾಗಿರುತ್ತಾನೆ. ಆ ಪೆಟ್ಟಿಗೆಯು ಯೆಹೋವನ ಹೆಸರಿನಲ್ಲಿ ಕರೆಯಲ್ಪಡುತ್ತದೆ. ಅಧ್ಯಾಯವನ್ನು ನೋಡಿ |