Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:10 - ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಾವೀದನು ದೇವರಾದ ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಫಿಲಿಷ್ಟಿಯರ ಮೇಲೆ ನಾನು ದಾಳಿಮಾಡಬಹುದೊ? ನೀವು ನನಗೆ ಜಯವನ್ನು ಕೊಡುವಿರೋ", ಎಂದು ದಾವೀದನು ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸಿದನು. “ಹೌದು, ಅವರನ್ನು ಎದುರಿಸು, ನಾನು ನಿನಗೆ ಜಯವನ್ನು ಕೊಡುವೆನು,” ಎಂದು ಸರ್ವೇಶ್ವರ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾವೀದನು ಯೆಹೋವನಿಗೆ, “ನಾನು ಫಿಲಿಷ್ಟಿಯರ ಸಂಗಡ ಯುದ್ಧಕ್ಕೆ ಹೋಗಬಹುದೇ?” ಎಂದು ವಿಚಾರಿಸಲಾಗಿ ಯೆಹೋವನು ಅವನಿಗೆ, “ಹೋಗು, ನಾನು ನಿನಗೆ ಫಿಲಿಷ್ಟಿಯರ ಮೇಲೆ ಜಯ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:10
14 ತಿಳಿವುಗಳ ಹೋಲಿಕೆ  

ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು. ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.


ಆದ್ದರಿಂದ ದಾವೀದನು ತಿರುಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಹಿಂದೆ ಹೋಗದೆ, ಅವರನ್ನು ಬಿಟ್ಟು ತಿರುಗಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.


ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.


ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.


ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ಖಂಡಿತವಾಗಿ ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.


ಇದಾದ ಮೇಲೆ ದಾವೀದನು ಯೆಹೋವ ದೇವರನ್ನು, “ಯೆಹೂದದ ಪಟ್ಟಣಗಳಲ್ಲಿ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಿದನು. ಯೆಹೋವ ದೇವರು ಅವನಿಗೆ, “ಹೋಗು,” ಎಂದರು. ಅದಕ್ಕವನು, “ನಾನು ಎಲ್ಲಿಗೆ ಹೋಗಲಿ?” ಎಂದನು. ಅದಕ್ಕೆ ದೇವರು, “ಹೆಬ್ರೋನಿಗೆ,” ಎಂದರು.


ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.


ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.


ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.


ಹಾಗೆಯೇ ದಾವೀದನು ಮತ್ತು ಅವನ ಸಂಗಡಿಗರೂ ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾರೆ,” ಎಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು