Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:14 - ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ದಾವೀದನು ತಿರುಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಹಿಂದೆ ಹೋಗದೆ, ಅವರನ್ನು ಬಿಟ್ಟು ತಿರುಗಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದಾವೀದನು ಪುನಃ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಯೆಹೋವನು ಅವನಿಗೆ, “ನೀನು ಅವರನ್ನು ಬೆನ್ನಟ್ಟಬೇಡ, ಅವರ ಎದುರುಗಡೆಯಿಂದ ದಾಳಿಮಾಡದೆ ಹಿಂತಿರುಗಿ ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ದಾಳಿಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದಾವೀದನು ಮತ್ತೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದನು. “ನೀನು ಅವರನ್ನು ಬೆನ್ನಟ್ಟಬೇಡ, ಸುತ್ತಿಕೊಂಡು ಹೋಗಿ ಬಾಕಾಮರಗಳಿರುವ ಆಚೆಕಡೆಯಿಂದ ಅವರ ಮೇಲೆ ದಾಳಿಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದಾವೀದನು ತಿರಿಗಿ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ಅವರನ್ನು ಬೆನ್ನಟ್ಟಬೇಡ; ಅವರ ಎದುರಿನಿಂದ ತಿರುಗಿಕೊಂಡು ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾವೀದನು ಮತ್ತೆ ಯೆಹೋವನಿಗೆ ಪ್ರಾರ್ಥಿಸಿ ವಿಚಾರಿಸಿದನು. ಯೆಹೋವನು ಅವನ ಪ್ರಾರ್ಥನೆಗೆ ಉತ್ತರಕೊಟ್ಟು, “ದಾವೀದನೇ, ಫಿಲಿಷ್ಟಿಯರನ್ನು ಬೆಟ್ಟದ ಮೇಲೆ ನೀನು ಹಿಂಬಾಲಿಸದಿರು. ಅವರ ಹಿಂದಿನಿಂದ ಹೋಗಿ ಬಾಲ್ಸಾಮ್ ಮರಗಳ ಹಿಂದೆ ಅವಿತುಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:14
7 ತಿಳಿವುಗಳ ಹೋಲಿಕೆ  

ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.


ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.


ಫಿಲಿಷ್ಟಿಯರು ಮತ್ತೆ ತಿರುಗಿಬಂದು ತಗ್ಗಿನಲ್ಲಿ ಸುಲಿಗೆಮಾಡಲು ಪ್ರಾರಂಭಿಸಿದರು.


ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು