1 ಪೂರ್ವಕಾಲ ವೃತ್ತಾಂತ 14:15 - ಕನ್ನಡ ಸಮಕಾಲಿಕ ಅನುವಾದ15 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬಾಕಾಮರಗಳ ತುದಿಯಲ್ಲಿ ಹೆಜ್ಜೆಗಳ ಶಬ್ದವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನನ್ನು ಮುನ್ನಡೆಸುತ್ತಿದ್ದಾನೆ ಎಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳುವಾಗ, ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನನಗೆ ಮುಂದಾಗಿ ಹೊರಟಿದ್ದಾರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದು ಸರ್ವೇಶ್ವರ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಒಬ್ಬ ಕಾವಲುಗಾರನನ್ನು ಮರಕ್ಕೆ ಹತ್ತಿಸು; ಫಿಲಿಷ್ಟಿಯರು ಬರುವ ಸಪ್ಪಳ ಕೇಳಿದೊಡನೆ ಅವರ ಮೇಲೆ ದಾಳಿಮಾಡು. ನಾನು ನಿನ್ನ ಮುಂದಾಗಿ ಹೋಗಿ ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |