Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:16 - ಕನ್ನಡ ಸಮಕಾಲಿಕ ಅನುವಾದ

16 ಆಗ ದಾವೀದನು, ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗಿಬ್ಯೋನಿನಿಂದ ಗೆಜೆರಿನವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು. ಇಸ್ರಾಯೇಲರು ಫಿಲಿಷ್ಟಿಯರ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನ ವರೆಗೂ ಸಂಹರಿಸುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಹೇಳಿದಂತೆಯೇ ದಾವೀದನು ಮಾಡಿದನು. ಫಿಲಿಷ್ಟಿಯರನ್ನು ಗಿಬ್ಯೋನಿನಿಂದ ಗೆಜೆರಿನವರೆಗೂ ಹಿಮ್ಮೆಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು; ಇಸ್ರಾಯೇಲ್ಯರು ಫಿಲಿಷ್ಟಿಯ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನವರೆಗೂ ಸಂಹರಿಸುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಹೇಳಿದಂತೆಯೇ ದಾವೀದನು ಮಾಡಿದನು. ದಾವೀದನೂ ಅವನ ಸೈನಿಕರೂ ಫಿಲಿಷ್ಟಿಯರನ್ನು ಸೋಲಿಸಿ ಗಿಬ್ಯೋನಿನಿಂದ ಹಿಡಿದು ಗೆಜೆರ್ ಪಟ್ಟಣದವರೆಗೂ ಅವರನ್ನು ಕೊಲ್ಲುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:16
12 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ದೇವರು ಆಜ್ಞಾಪಿಸಿದ ಪ್ರಕಾರವೇ ನೋಹನು ಎಲ್ಲವನ್ನು ಮಾಡಿದನು.


ಯೇಸುವಿನ ತಾಯಿಯು ಸೇವಕರಿಗೆ, “ಆತನು ನಿಮಗೆ ಹೇಳಿದಂತೆ ಮಾಡಿರಿ,” ಎಂದು ಹೇಳಿದಳು.


ಇದಲ್ಲದೆ ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,


ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.


ಆಗ ದಾವೀದನು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗೆಬದಿಂದ ಗೆಜೆರಿನವರೆಗೆ ಫಿಲಿಷ್ಟಿಯರನ್ನು ಹೊಡೆದನು.


ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು.


ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು. ಯೆಹೋವ ದೇವರು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದರು.


ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು. ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ, ಅಪರೂಪವಾದ ತಮ್ಮ ಕೆಲಸವನ್ನು ನಡಿಸಿ, ಅಪೂರ್ವವಾದ ತಮ್ಮ ಕಾರ್ಯವನ್ನು ನೆರವೇರಿಸುವನು.


ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದದ್ದರಿಂದ ಫಿಲಿಷ್ಟಿಯರು ಸೋತುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು