1 ಪೂರ್ವಕಾಲ ವೃತ್ತಾಂತ 14:2 - ಕನ್ನಡ ಸಮಕಾಲಿಕ ಅನುವಾದ2 ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ, ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹೀಗೆ ದಾವೀದನು ದೇವಪ್ರಜೆಗಳಾದ ಇಸ್ರಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತ ಸ್ಥಾನಕ್ಕೇರಿಸಿ ತನ್ನನ್ನು ಇಸ್ರಯೇಲ್ ರಾಜನನ್ನಾಗಿ ಸ್ಥಿರಪಡಿಸುವರೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದರಿಂದ ದಾವೀದನು ದೇವಪ್ರಜೆಗಳಾದ ಇಸ್ರಾಯೇಲ್ಯರ ನಿವಿುತ್ತವಾಗಿ ತನ್ನ ರಾಜ್ಯವು ಉನ್ನತಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲ್ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವರು ತನ್ನನ್ನು ಇಸ್ರೇಲರ ಅರಸನನ್ನಾಗಿ ಆಗಲೇ ಮಾಡಿದ್ದಾನೆಂದು ದಾವೀದನಿಗೆ ತಿಳಿದುಬಂತು. ಆತನು ದಾವೀದನ ಸಾಮ್ರಾಜ್ಯವನ್ನು ವಿಸ್ತರಿಸಿ ಬಲಿಷ್ಠಗೊಳಿಸಿದನು. ಯೆಹೋವನು ದಾವೀದನನ್ನೂ ಇಸ್ರೇಲರನ್ನೂ ಪ್ರೀತಿಸಿದ್ದರಿಂದ ಹಾಗೆ ಮಾಡಿದನು. ಅಧ್ಯಾಯವನ್ನು ನೋಡಿ |