Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:8 - ಕನ್ನಡ ಸಮಕಾಲಿಕ ಅನುವಾದ

8 ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆದುರಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಅಭಿಷೇಕಿಸಿ ಅವನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ತಾನೂ ಅವರನ್ನೆದುರಿಸಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾವೀದನು ಇಸ್ರಯೇಲರೆಲ್ಲರ ಇಡೀ ನಾಡಿಗೆ ಅರಸನಾಗಿ ಅಭಿಷಿಕ್ತನಾಗಿದ್ದಾನೆಂಬ ವರ್ತಮಾನವನ್ನು ಫಿಲಿಷ್ಟಿಯರು ಕೇಳಿದರು. ಅವನನ್ನು ಸೆರೆಹಿಡಿಯಲು ತಮ್ಮ ಸೈನ್ಯವನ್ನು ಕಳುಹಿಸಿದರು. ದಾವೀದನು ಅವರನ್ನು ಎದುರಿಸಲು ಸಿದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವದಕ್ಕೆ ಹೊರಟರು; ದಾವೀದನು ಇದನ್ನು ಕೇಳಿ ತಾನೂ ಅವರೆದುರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನು ಇಸ್ರೇಲರ ಅರಸನಾಗಿ ಆರಿಸಲ್ಪಟ್ಟಿದ್ದನ್ನು ಕೇಳಿ ಎಲ್ಲಾ ಫಿಲಿಷ್ಟಿಯರು ಅವನೊಂದಿಗೆ ಯುದ್ಧಮಾಡಲು ಬಂದರು. ದಾವೀದನು ಇದನ್ನು ಅರಿತು ಯುದ್ಧಸನ್ನದ್ಧನಾಗಿ ಫಿಲಿಷ್ಟಿಯರ ವಿರುದ್ಧವಾಗಿ ಯುದ್ಧಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:8
8 ತಿಳಿವುಗಳ ಹೋಲಿಕೆ  

ಆಕೀಷನ ಸೇವಕರು ಅವನಿಗೆ, “ಇವನು ನಾಡಿನ ಅರಸನಾದ ದಾವೀದನಲ್ಲವೋ? “ ‘ಸೌಲನು ಸಾವಿರಗಳನ್ನೂ, ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’ ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?”


ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಯೆಹೋವ ದೇವರು ಸಮುಯೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು