1 ಪೂರ್ವಕಾಲ ವೃತ್ತಾಂತ 15:16 - ಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ದಾವೀದನು ವಾದ್ಯಗಳನ್ನೂ ವಿಶೇಷವಾದ ವೀಣೆಗಳನ್ನೂ, ಕಿನ್ನರಿಗಳನ್ನೂ, ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನೂ ಎತ್ತುವ ಹಾಗೆ, ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವುದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸ್ವರಮಂಡಲ, ಕಿನ್ನರಿ, ತಾಳಗಳೊಂದಿಗೆ ಸಂಭ್ರಮದಿಂದ ವಾದ್ಯಗಳನ್ನು ಬಾರಿಸುವುದಕ್ಕೂ ಹಾಡುವುದಕ್ಕೂ ವಿವಿಧ ಲೇವಿಯರನ್ನು ನೇಮಿಸಬೇಕೆಂದು ದಾವೀದನು ಲೇವಿಯರ ನಾಯಕನಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ದಾವೀದನು ಲೇವಿಯರ ಪ್ರಧಾನರಿಗೆ - ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ ಕಿನ್ನರಿ ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹ ಧ್ವನಿಮಾಡುವದಕ್ಕಾಗಿ ನೇವಿುಸಿರಿ ಎಂದು ಆಜ್ಞಾಪಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದಾವೀದನು ಲೇವಿಯರಿಗೆ ತಮ್ಮ ಸಹೋದರರಾದ ಗಾಯಕರನ್ನು ಕರೆದುಕೊಂಡು ಬರಲು ಹೇಳಿದನು. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ತಂದು ಆನಂದಗೀತೆಗಳನ್ನು ಹಾಡುವಂತೆ ಅವರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿ |
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.