Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:18 - ಕನ್ನಡ ಸಮಕಾಲಿಕ ಅನುವಾದ

18 ಅವರ ಸಂಗಡ ಎರಡನೆಯ ದರ್ಜೆಯವರಾದ ತಮ್ಮ ಸಹೋದರರಾಗಿರುವ ಜೆಕರ್ಯನನ್ನೂ ಬೇನನನ್ನೂ ಯಾಜೀಯೇಲನನ್ನೂ, ಶೆಮೀರಾಮೋತನನ್ನೂ ಯೆಹೀಯೇಲನನ್ನೂ, ಉನ್ನೀಯನ್ನೂ, ಎಲೀಯಾಬನನ್ನೂ, ಬೆನಾಯನನ್ನೂ, ಮಾಸೇಯನನ್ನೂ, ಮತ್ತಿತ್ಯನನ್ನೂ, ಎಲೀಫೆಲೇಹುನನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಓಬೇದ್ ಏದೋಮನನ್ನೂ ಯೆಹೀಯೇಲನನ್ನೂ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತಮ್ಮ ಸಹೋದರರೊಳಗೆ ಎರಡನೆಯ ತರಗತಿಯವರಾದ ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ವಿುಕ್ನೇಯ, ದ್ವಾರಪಾಲಕರಾದ ಓಬೇದೆದೋಮ್ ಯೆಗೀಯೇಲರು ಇವರನ್ನು ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಲೇವಿಯರ ಇನ್ನೊಂದು ಗುಂಪು ಇತ್ತು. ಅವರು ಯಾರೆಂದರೆ: ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರೆಲ್ಲಾ ಲೇವಿಯರ ಕಾವಲುಗಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:18
15 ತಿಳಿವುಗಳ ಹೋಲಿಕೆ  

ಓಬೇದ್ ಏದೋಮನ ಪುತ್ರರು: ಚೊಚ್ಚಲ ಮಗನು ಶೆಮಾಯ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ; ನಾಲ್ಕನೆಯವನು ಸಾಕಾರ; ಐದನೆಯವನು ನೆತನೆಯೇಲ್;


ಓಬೇದ್ ಏದೋಮನಿಗೆ ದಕ್ಷಿಣ ಭಾಗ ಬಂತು. ಅವನ ಪುತ್ರರಿಗೆ ಉಗ್ರಾಣ ಮನೆ ಬಂತು.


ಇವರೆಲ್ಲರು ಓಬೇದ್ ಏದೋಮನ ಪುತ್ರರು; ಇವರೂ, ತಮ್ಮ ಪುತ್ರರೂ, ತಮ್ಮ ಸಹೋದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೆದೆದೋಮನವರು ಅರವತ್ತೆರಡು ಮಂದಿಯಾಗಿದ್ದರು.


ಓಬೇದ್ ಏದೋಮ್ ಮತ್ತು ಅವನ ಸಹಚರರಾದ ಅರವತ್ತೆಂಟು ಮಂದಿಯೂ, ದ್ವಾರಪಾಲಕರಾದ ಯೆದುತೂನನ ಮಗ ಓಬೇದ್ ಎದೋಮ್ ಮತ್ತು ಹೋಸ ನೇಮಕವಾಗಿದ್ದರು.


ದೇವರ ಮಂಜೂಷವು ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ, ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದರು.


ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.


ಹಾಗೆಯೇ ಲೇವಿಯರು ಯೋಯೇಲನ ಮಗನಾದ ಹೇಮಾನನನ್ನೂ, ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ, ಮೆರಾರೀಯ ಪುತ್ರರ ಸಂಬಂಧಿಕರಲ್ಲಿ ಕೂಷಾಯನ ಮಗ ಏತಾನನನ್ನೂ ನೇಮಿಸಿದರು.


ಸಂಗೀತಗಾರರಾದ ಹೇಮಾನನೂ, ಆಸಾಫನೂ, ಏತಾನನೂ ಕಂಚಿನ ತಾಳಗಳನ್ನು ಬಾರಿಸುವವರು.


ಜೆಕರ್ಯ, ಅಜಿಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ, ಬೆನಾಯ ಎಂಬವರನ್ನು ಅಲಮೋತ್ ಎಂಬ ತಾರಸ್ಥಾಯಿಯ ವೀಣೆಗಳನ್ನು ಬಾರಿಸುವುದಕ್ಕೆ ಆರಿಸಿಕೊಂಡರು.


ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದ್ ಏದೋಮ್, ಯೆಹೀಯೇಲ್, ಅಜಜ್ಯ ಎಂಬವರನ್ನು ಶೆಮಿನಿಥ್ ಎಂಬ ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸುವುದಕ್ಕೂ ನೇಮಿಸಿಕೊಂಡರು.


ದಾವೀದನು ಯೆಹೋವ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.


ಮೀಕನ ಸಹೋದರನು ಇಷೀಯನು; ಇಷೀಯನ ಪುತ್ರರಲ್ಲಿ ಜೆಕರ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು