Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:26 - ಕನ್ನಡ ಸಮಕಾಲಿಕ ಅನುವಾದ

26 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದ್ದರಿಂದ, ಅವರು ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರ ಸಹಾಯ ದೊರೆತುದರಿಂದ ಅವರು ಏಳು ಹೋರಿಗಳನ್ನೂ ಏಳು ಕುರಿಗಳನ್ನೂ ಬಲಿದಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಉತ್ಸವದಿಂದ ತರುತ್ತಿರುವಾಗ ಅದನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದರಿಂದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದನು. ಅಲ್ಲಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:26
12 ತಿಳಿವುಗಳ ಹೋಲಿಕೆ  

ಬಿಳಾಮನು ಬಾಲಾಕನಿಗೆ, “ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಇಲ್ಲಿ ನನಗೆ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.


ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


ಹಬ್ಬದ ಏಳು ದಿವಸಗಳಲ್ಲಿ ಪ್ರತಿದಿನವೂ ಅವನು ಯೆಹೋವ ದೇವರಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿದಿನವೂ ದೋಷಪರಿಹಾರ ಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು.


ಯೆಹೋವ ದೇವರ ಮಂಜೂಷವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ, ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.


ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.


“ ‘ಏಳನೆಯ ದಿವಸದಲ್ಲಿ ದೋಷವಿಲ್ಲದ ಏಳು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು