1 ಪೂರ್ವಕಾಲ ವೃತ್ತಾಂತ 16:1 - ಕನ್ನಡ ಸಮಕಾಲಿಕ ಅನುವಾದ1 ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕಾಗಿ ಸಿದ್ಧಪಡಿಸಿದ್ದ ಗುಡಾರದೊಳಗೆ ಒಯ್ದು, ಅಲ್ಲಿ ಅದನ್ನು ಸ್ಥಾಪಿಸಿದರು. ದೇವರಿಗೆ ದಹನಬಲಿಗಳನ್ನೂ, ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿಸಿದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು. ಅಧ್ಯಾಯವನ್ನು ನೋಡಿ |