Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ಯಾವಾಗಲೂ ಹುಡುಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಶ್ರಯಿಸಿರಿ ಸರ್ವೇಶನನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ಯಾವಾಗಲೂ ಆತನ ದರ್ಶನವನ್ನು ಅಪೇಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:11
11 ತಿಳಿವುಗಳ ಹೋಲಿಕೆ  

ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ. ಇಸ್ರಾಯೇಲರ ದೇವರೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುವರು. ದೇವರಿಗೆ ಸ್ತುತಿಯಾಗಲಿ.


ದೇವರು ನಮ್ಮ ಮೇಲೆ ಕರುಣೆಯಿಟ್ಟು, ನಮ್ಮನ್ನು ಆಶೀರ್ವದಿಸಲಿ. ದೇವರು ತಮ್ಮ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ.


ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.


ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.


ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


“ಈಗ ದೇವರಾದ ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ. ಯೆಹೋವ ದೇವರೇ, ನಿಮ್ಮ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ. ನಿಮ್ಮ ಭಕ್ತರು ಒಳ್ಳೆಯದರಲ್ಲಿ ಸಂತೋಷಪಡಲಿ.


ತಮ್ಮ ಬಲದ ಮಂಜೂಷವನ್ನು ಸೆರೆಗೆ ಒಪ್ಪಿಸಿಬಿಟ್ಟರು. ತಮ್ಮ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟರು.


ದೇವರ ಪರಿಶುದ್ಧ ನಾಮವನ್ನು ಹೊಗಳಿರಿ, ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.


ಬಾಕಾ ತಗ್ಗನ್ನು ದಾಟುವಾಗ ಅವರು ಅದನ್ನು ಬುಗ್ಗೆಯಾಗಿ ಮಾಡುತ್ತಾರೆ. ಮುಂಗಾರು ಮಳೆಯು ಕೊಳಗಳನ್ನು ತುಂಬುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು