Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:12 - ಕನ್ನಡ ಸಮಕಾಲಿಕ ಅನುವಾದ

12 ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆತನ ದಾಸ ಇಸ್ರಯೇಲನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನ ಸೇವಕನಾದ ಇಸ್ರಾಯೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನ ಸೇವಕನಾದ ಇಸ್ರೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ಸಂತತಿಯವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:12
17 ತಿಳಿವುಗಳ ಹೋಲಿಕೆ  

ನಿಮ್ಮ ನಿಯಮಗಳನ್ನು ಯಾವಾಗಲೂ ಹಂಬಲಿಸುತ್ತಿರುವುದರಿಂದ, ನನ್ನ ಪ್ರಾಣವು ಕರಗಿಹೋಗುತ್ತಿದೆ.


ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.


ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.


ಯೆಹೋವ ದೇವರೇ, ನೀವು ನೀತಿವಂತರು, ನಿಮ್ಮ ನಿಯಮಗಳು ಸರಿಯಾದವುಗಳೇ.


ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು; ನಿಮ್ಮ ನಂಬಿಗಸ್ತಿಕೆಯಿಂದಲೇ ನೀವು ನನ್ನನ್ನು ಕಷ್ಟಪಡಿಸಿದ್ದೀರಿ ಎಂದು ನನಗೆ ಗೊತ್ತಿದೆ.


ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಆಗ ಬಲಿಪೀಠವು ಹೀಗೆ ಮಾತನಾಡುವುದನ್ನು ಕೇಳಿದೆನು: “ಕರ್ತಾ, ಸರ್ವಶಕ್ತರಾದ ದೇವರೇ, ನಿಮ್ಮ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ.”


ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!


ನಿಮ್ಮ ಬಾಯಿಂದ ಬರುವ ನಿಯಮಗಳನ್ನೆಲ್ಲಾ ನನ್ನ ತುಟಿಗಳಿಂದ ನಾನು ವರ್ಣಿಸಿದ್ದೇನೆ.


ಈಜಿಪ್ಟಿನಲ್ಲಿ ಆದ ಸೂಚಕಕಾರ್ಯಗಳನ್ನೂ, ಚೋವನ್ ಬಯಲಿನಲ್ಲಿ ನಡೆಸಿದ ಅದ್ಭುತಗಳನ್ನು ಮಾಡಿದ ದಿವಸವನ್ನೂ ಅವರು ಜ್ಞಾಪಕ ಮಾಡಿಕೊಳ್ಳಲಿಲ್ಲ.


ಯೆಹೋವ ದೇವರ ಕ್ರಿಯೆಗಳನ್ನು ಜ್ಞಾಪಕಮಾಡಿಕೊಳ್ಳುವೆನು. ಹೌದು, ಆದಿಯಿಂದಲೂ ನೀವು ನಡೆಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು.


ಯೆಹೋವ ದೇವರ ಭಯವು ಶುದ್ಧವಾಗಿದ್ದು, ಎಂದೆಂದಿಗೂ ಶಾಶ್ವತವಾಗಿದೆ. ಯೆಹೋವ ದೇವರ ತೀರ್ಪುಗಳು ಸತ್ಯವಾಗಿದ್ದು, ಅವೆಲ್ಲವೂ ನೀತಿಯುಳ್ಳದ್ದಾಗಿವೆ.


ಅವರ ಸೇವಕನಾದ ಇಸ್ರಾಯೇಲಿನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,


ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.


“ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.


ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು