Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:21 - ಕನ್ನಡ ಸಮಕಾಲಿಕ ಅನುವಾದ

21 ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರಿಗಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ I ಅವರಿಗಾಗಿ ಅರಸರನ್ನಾತ ಗದರಿಸದೆ ಬಿಡಲಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಅವರಿಗೆ ಕೇಡುಮಾಡಲು ಯೆಹೋವನು ಯಾರಿಗೂ ಅವಕಾಶಕೊಡಲಿಲ್ಲ. ಅವರನ್ನು ಬಾಧಿಸದಂತೆ ಆತನು ಅರಸರುಗಳಿಗೆ ಎಚ್ಚರಿಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:21
9 ತಿಳಿವುಗಳ ಹೋಲಿಕೆ  

ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.


ಆದರೆ ಯೆಹೋವ ದೇವರು ಫರೋಹನನ್ನೂ, ಅವನ ಮನೆಯನ್ನೂ ಅಬ್ರಾಮನ ಹೆಂಡತಿ ಸಾರಯಳಿಗಾಗಿ ಭಯಂಕರವಾದ ರೋಗಗಳಿಂದ ಬಾಧಿಸಿದರು.


ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.


ನಿನಗೆ ಕೇಡು ಮಾಡುವುದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ, ‘ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಹೇಳದಂತೆ ಎಚ್ಚರವಾಗಿರು,’ ಎಂದು ಹೇಳಿದರು.


ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.


ಅವರು ಜನಾಂಗದಿಂದ ಜನಾಂಗಕ್ಕೂ, ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.


ಅವರು ಸೇನಾಧೀಶ್ವರ ಯೆಹೋವ ದೇವರ ಜನರನ್ನು ಅವಮಾನಿಸಿ ಮತ್ತು ಅಪಹಾಸ್ಯ ಮಾಡಿದ್ದರಿಂದಲೇ ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು