Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:27 - ಕನ್ನಡ ಸಮಕಾಲಿಕ ಅನುವಾದ

27 ಅವರ ಸನ್ನಿಧಿಯಲ್ಲಿ ಘನತೆಯೂ ಪ್ರಭೆಯೂ; ಅವರ ಪರಿಶುದ್ಧ ಸ್ಥಳದಲ್ಲಿ ಬಲವೂ ಸಂತೋಷವೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿ, ಸಂತೋಷ ಆತನ ಗರ್ಭಗುಡಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲಸಂತೋಷಗಳೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲವೂ ಸಂತೋಷವೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:27
12 ತಿಳಿವುಗಳ ಹೋಲಿಕೆ  

ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ; ಬಲವೂ, ಸೌಂದರ್ಯವೂ ಅವರ ಪರಿಶುದ್ಧ ಸ್ಥಳದಲ್ಲಿ ಇವೆ.


ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ! ನೀವು ನಿಮ್ಮ ಮಹಿಮೆಯನ್ನು ಆಕಾಶಗಳಲ್ಲಿ ಸ್ಥಾಪಿಸಿದ್ದೀರಿ.


ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು.


ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ, ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಲೋಹವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು