1 ಪೂರ್ವಕಾಲ ವೃತ್ತಾಂತ 16:35 - ಕನ್ನಡ ಸಮಕಾಲಿಕ ಅನುವಾದ35 ನಮ್ಮ ರಕ್ಷಣೆಯ ದೇವರೇ, “ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸಿರಿ, ಜನಾಂಗಗಳೊಳಗಿಂದ ನಮ್ಮನ್ನು ಬಿಡುಗಡೆ ಮಾಡಿ ಒಂದುಗೂಡಿಸಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಹೇ ದೇವಾ, ನಮ್ಮ ಸಹಾಯಕ, ನಮ್ಮನ್ನು ಉದ್ಧರಿಸು I ನಾಡು ನಾಡುಗಳಿಂದ ನಮ್ಮನ್ನು ಒಂದುಗೂಡಿಸು I ನಿನ್ನ ಪವಿತ್ರ ನಾಮವನು ಭಜಿಸುವೆವು ನಾವು I ನಿನ್ನ ಸ್ತುತಿಸ್ತೋತ್ರಗಳಲಿ ಹೆಚ್ಚಳಪಡುವೆವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ಬಿಡಿಸಿ ಕೂಡಿಸು; ಆಗ ನಿನ್ನ ಪರಿಶುದ್ಧನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ರಕ್ಷಕನಾದ ಯೆಹೋವನೇ, ನಮ್ಮನ್ನು ರಕ್ಷಿಸು; ನಮ್ಮನ್ನು ಒಂದುಗೂಡಿಸು; ಅನ್ಯಜನಾಂಗಗಳಿಂದ ನಮ್ಮನ್ನು ರಕ್ಷಿಸು. ಆಗ ನಾವು ನಿನ್ನ ಪರಿಶುದ್ಧ ನಾಮವನ್ನು ಕೀರ್ತಿಸುವೆವು. ನಮ್ಮ ಹಾಡುಗಳಿಂದ ನಿನ್ನನ್ನು ಘನಪಡಿಸುವೆವು” ಎಂದು ಆತನಿಗೆ ಹೇಳಿರಿ. ಅಧ್ಯಾಯವನ್ನು ನೋಡಿ |