Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:40 - ಕನ್ನಡ ಸಮಕಾಲಿಕ ಅನುವಾದ

40 ಯೆಹೋವ ದೇವರು ಇಸ್ರಾಯೇಲಿಗೆ ಆಜ್ಞಾಪಿಸಿದ ಮೋಶೆಯ ನಿಯಮದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡಲೂ ಅವರು ಪ್ರತಿದಿನವೂ ಉದಯಕಾಲದಲ್ಲಿ ಮತ್ತು ಸಾಯಂಕಾಲದಲ್ಲಿ ದಹನಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಬಲಿಪೀಠದ ಮೇಲೆ ಪ್ರತೀದಿನ ಮುಂಜಾನೆ ಹಾಗು ಸಂಜೆ ದಹನಬಲಿಯರ್ಪಿಸಬೇಕಾಗಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವರು ಪ್ರತಿದಿನವೂ ಪ್ರಾತಃಕಾಲಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲ್ಯರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:40
11 ತಿಳಿವುಗಳ ಹೋಲಿಕೆ  

“ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ಪಾಪ ಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.”


ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,


ಸುತ್ತಮುತ್ತಲಿನ ಜನರ ಭಯವಿದ್ದರೂ, ಅವರು ಬಲಿಪೀಠವನ್ನು ಅದರ ಅಸ್ತಿವಾರದ ಮೇಲೆ ಕಟ್ಟಿದರು. ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಅರ್ಪಿಸಿದರು.


ಅವನು ಯೆಹೋವ ದೇವರ ನಿಯಮದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಆಸ್ತಿಯಿಂದಲೇ ಅವನ ಭಾಗವನ್ನು ನೇಮಿಸಿದನು.


ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.


ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.


ಅಹೀಟೂಬನ ಮಗ ಚಾದೋಕನೂ ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.


ಅವನು ಧಾನ್ಯ ಸಮರ್ಪಣೆಯ ಬಲಿಯನ್ನು ತಂದು, ಅದರಲ್ಲಿ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಬೆಳಗಿನ ದಹನಬಲಿ ಯಜ್ಞದ ಬಳಿಯಲ್ಲಿ ಅದನ್ನು ಹೋಮ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು