1 ಪೂರ್ವಕಾಲ ವೃತ್ತಾಂತ 16:41 - ಕನ್ನಡ ಸಮಕಾಲಿಕ ಅನುವಾದ41 “ದೇವರ ಪ್ರೀತಿ ನಿತ್ಯವಾಗಿ ನೆಲೆಗೊಂಡಿರುವುದು,” ಎಂದು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಹೇಮಾನನೂ, ಯೆದುತೂನನೂ ಹೆಸರು ಹೆಸರಾಗಿ ಆಯ್ಕೆಗೊಂಡು, ನೇಮಕರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಅಲ್ಲಿ ಅವರೊಂದಿಗೆ ಸರ್ವೇಶ್ವರನ ನಿತ್ಯಪ್ರೀತಿಗಾಗಿ ಅವರನ್ನು ಸ್ತುತಿಸಿ, ಸಂಗೀತ ಹಾಡಲು ಹೇಮಾನ್, ಯೆದುತೂನ ಹಾಗು ಇನ್ನಿತರರು ನಿರ್ದಿಷ್ಟವಾಗಿ ನೇಮಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅವರ ಬಳಿಯಲ್ಲಿ ಯೆಹೋವನನ್ನು ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವದಕ್ಕೆ ಹೇಮಾನ್ ಯೆದುತೂನರೂ ಹೆಸರು ಹೆಸರಾಗಿ ನೇವಿುಸಲ್ಪಟ್ಟ ಬೇರೆ ಜನರೂ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41-42 ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು. ಅಧ್ಯಾಯವನ್ನು ನೋಡಿ |
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.