1 ಪೂರ್ವಕಾಲ ವೃತ್ತಾಂತ 16:42 - ಕನ್ನಡ ಸಮಕಾಲಿಕ ಅನುವಾದ42 ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಸ್ತುತಿಗೀತೆಗಳನ್ನು ಹಾಡುವಾಗ ತುತೂರಿ, ತಾಳ, ಮತ್ತಿತರ ವಾದ್ಯಗಳನ್ನು ಬಾರಿಸುವವರ ಮೇಲ್ವಿಚಾರಣೆಯೂ ಹೇಮಾನ್ ಮತ್ತು ಯೆದುತೂನರದಾಗಿತ್ತು. ಯೆದುತೂನನ ಮಕ್ಕಳಿಗೆ ದ್ವಾರಗಳನ್ನು ಕಾಯುವ ಹೊಣೆಯೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಹೇಮಾನ್‍ಯೆದುತೂನರ ಹತ್ತಿರ ವಾದ್ಯಗಾರರಿಗೋಸ್ಕರ ತುತೂರಿ ತಾಳ ಮೊದಲಾದ ದೇವಕೀರ್ತನಾಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳೂ ದ್ವಾರಪಾಲಕರಾಗಿ ನೇವಿುಸಲ್ಪಟ್ಟರು. ಅಧ್ಯಾಯವನ್ನು ನೋಡಿ |
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.