Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:6 - ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಯಾಜಕರಾದ ಬೆನಾಯನೂ, ಯಹಜಿಯೇಲನೂ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬೆನಾಯ ಹಾಗೂ ಯಹಜೀಯೇಲ್ ಎಂಬ ಯಾಜಕರು ನಿಬಂಧನಾ ಮಂಜೂಷದ ಮುಂದೆ ಕ್ರಮವಾಗಿ ತುತೂರಿಗಳನ್ನು ಊದಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ನಿಬಂಧನಮಂಜೂಷದ ಮುಂದೆ ನಿತ್ಯವೂ ತುತೂರಿಗಳನ್ನು ಊದುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬೆನಾಯನೂ ಯೆಹಜೀಯೇಲನೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಬಳಿಯಲ್ಲಿ ತುತ್ತೂರಿಗಳನ್ನು ಯಾವಾಗಲೂ ಊದುವ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:6
8 ತಿಳಿವುಗಳ ಹೋಲಿಕೆ  

ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


“ಯಾಜಕರಾಗಿರುವ ಆರೋನನ ಪುತ್ರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.


ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು.


ಆಸಾಫನಿಗೂ, ಅವನ ಜೊತೆ ಲೇವಿಯರಿಗೂ ಯೆಹೋವ ದೇವರ ಸ್ತೋತ್ರಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು:


ಅವರ ಸಂಗಡ ಎರಡನೆಯ ದರ್ಜೆಯವರಾದ ತಮ್ಮ ಸಹೋದರರಾಗಿರುವ ಜೆಕರ್ಯನನ್ನೂ ಬೇನನನ್ನೂ ಯಾಜೀಯೇಲನನ್ನೂ, ಶೆಮೀರಾಮೋತನನ್ನೂ ಯೆಹೀಯೇಲನನ್ನೂ, ಉನ್ನೀಯನ್ನೂ, ಎಲೀಯಾಬನನ್ನೂ, ಬೆನಾಯನನ್ನೂ, ಮಾಸೇಯನನ್ನೂ, ಮತ್ತಿತ್ಯನನ್ನೂ, ಎಲೀಫೆಲೇಹುನನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಓಬೇದ್ ಏದೋಮನನ್ನೂ ಯೆಹೀಯೇಲನನ್ನೂ ನೇಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು