Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:1 - ಕನ್ನಡ ಸಮಕಾಲಿಕ ಅನುವಾದ

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಒಂದು ದಿನ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಅರಸ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ಯೆಹೋವನ ನಿಬಂಧನ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ತನ್ನ ಮನೆಗೆ ಹಿಂತಿರುಗಿದ ಬಳಿಕ ಪ್ರವಾದಿಯಾದ ನಾತಾನನಿಗೆ, “ನಾನು ದೇವದಾರು ಮರಗಳಿಂದ ಮಾಡಿದ ಮನೆಯಲ್ಲಿ ವಾಸಮಾಡುತ್ತಿರುವಾಗ ದೇವರ ಒಡಂಬಡಿಕೆಯ ಪೆಟ್ಟಿಗೆಯು ಗುಡಾರದೊಳಗೆ ಇಡಲ್ಪಟ್ಟಿದೆ. ದೇವರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:1
28 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು, ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಒಂದು ಗುಡಾರದ ಸ್ಥಳದಿಂದ ಇನ್ನೊಂದು ಗುಡಾರದ ಸ್ಥಳಕ್ಕೂ, ಒಂದು ತಂಗುವ ಸ್ಥಳದಿಂದ ಇನ್ನೊಂದು ತಂಗುವ ಸ್ಥಳಕ್ಕೂ ಹೋಗುತ್ತಿದ್ದೆನು.


ದಾವೀದನ ಪಟ್ಟಣಗಳಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿಕೊಂಡು, ದೇವರ ಮಂಜೂಷಕ್ಕೋಸ್ಕರ ಸ್ಥಳಗಳನ್ನು ಸಿದ್ಧಮಾಡಿ, ಅದರ ನಿಮಿತ್ತ ಗುಡಾರ ಹಾಕಿದನು.


ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.


“ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”


ನೆಬೂಕದ್ನೆಚ್ಚರನು ಎಂಬ ನಾನು ನನ್ನ ಅರಮನೆಯಲ್ಲಿ ಸಂತೃಪ್ತನಾಗಿದ್ದೆ ಮತ್ತು ಸಮೃದ್ಧನಾಗಿದ್ದೆ.


“ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ?


ನನ್ನ ಕಣ್ಣುಗಳಿಗೆ ನಿದ್ದೆಯನ್ನು ಕೊಡೆನು, ನನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡೆನು.”


ಆದರೆ ದಾವೀದನು ಯೆಹೋವ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಗುಡಾರವನ್ನು ಹಾಕಿಸಿದ್ದನು.


ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯವರೆಗೆ ಅವನ ಸಮಸ್ತ ಆಳಿಕೆಯೂ, ಅವನ ಪರಾಕ್ರಮವೂ, ಅವನ ಮೇಲೆಯೂ, ಇಸ್ರಾಯೇಲಿನ ಮೇಲೆಯೂ, ಬೇರೆ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಸಂಭವಿಸಿದ ಘಟನೆಗಳು,


ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.


ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು.


ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ, ಪ್ರವಾದಿ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ಕೆರೇತ್ಯರನ್ನೂ, ಪೆಲೇತ್ಯರನ್ನೂ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಕೂಡಿಸಿಕೊಂಡು ಹೋಗಿ,


ಆಗ ಅರಸನಿಗೆ, “ಪ್ರವಾದಿಯಾದ ನಾತಾನನು,” ಎಂದರು. ಅವನು ಒಳಗೆ ಅರಸನ ಮುಂದೆ ಬಂದಾಗ, ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.


ಆದರೆ ಯಾಜಕನಾದ ಚಾದೋಕನೂ, ಯೆಹೋಯಾದಾವನ ಮಗ ಬೆನಾಯನೂ, ಪ್ರವಾದಿಯಾದ ನಾತಾನನೂ, ಶಿಮ್ಮಿಯೂ, ರೇಯಿಯೂ, ದಾವೀದನ ಪರಾಕ್ರಮಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.


ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.


ಯೆಹೋವ ದೇವರು ದಾವೀದನ ಬಳಿಗೆ ನಾತಾನನನ್ನು ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಅವನಿಗೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.


ಅವರು ಯೆಹೋವ ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ದಾವೀದನು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು.


ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು.


“ನನ್ನ ತಂದೆ ದಾವೀದನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,


ಆಗ ನಾತಾನನು ದಾವೀದನಿಗೆ, “ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು; ಏಕೆಂದರೆ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.


ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು.


ಆಗ ಅರಸನಾದ ದಾವೀದನು ಎದ್ದು ನಿಂತು, “ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ. ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ನಿಮಿತ್ತವಾಗಿಯೂ, ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಗೆ ಆಲಯವನ್ನು ನಾನು ಕಟ್ಟಿಸಲು ಮನಸ್ಸು ಮಾಡಿ, ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


“ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು.


ತನ್ನ ಮಗ ಸೊಲೊಮೋನನನ್ನು ಕಳುಹಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಆಲಯವನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು