Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:16 - ಕನ್ನಡ ಸಮಕಾಲಿಕ ಅನುವಾದ

16 ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರೇ, ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು ಹೇಳಿದ್ದೇನೆಂದರೆ, “ದೇವರೇ, ಯೆಹೋವನೇ, ನನ್ನಂಥವನಿಗೆ ಈ ಪದವಿಯನ್ನು ಅನುಗ್ರಹಿಸಿದ್ದಿ, ನಾನೆಷ್ಟರವನು? ನನ್ನ ಮನೆ ಎಷ್ಟರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಳಿಕ ಅರಸ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ದೇವರೇ, ಸರ್ವೇಶ್ವರಾ, ನನ್ನಂಥವನಿಗೆ ತಾವು ಈ ಪದವಿಯನ್ನು ಅನುಗ್ರಹಿಸಿದ್ದೀರಿ; ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅನಂತರ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕೂತುಕೊಂಡು - ದೇವರೇ, ಯೆಹೋವನೇ, ನನ್ನಂಥವನಿಗೆ ನೀನು ಈ ಪದವಿಯನ್ನು ಅನುಗ್ರಹಿಸಿದಿಯೇ! ನಾನೆಷ್ಟರವನು! ನನ್ನ ಮನೆ ಎಷ್ಟರದು! ದೇವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ದಾವೀದನು ಪವಿತ್ರಗುಡಾರಕ್ಕೆ ಹೋಗಿ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರಾದ ಯೆಹೋವನೇ, ನೀನು ನನ್ನನ್ನೂ ನನ್ನ ಕುಟುಂಬವನ್ನೂ ಎಷ್ಟೋ ಆಶೀರ್ವದಿಸಿರುವೆ. ನೀನು ಯಾಕೆ ಹೀಗೆ ಮಾಡಿದಿಯೊ ನನಗೆ ತಿಳಿಯುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:16
15 ತಿಳಿವುಗಳ ಹೋಲಿಕೆ  

ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?


ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು? ನೀವು ಅವನನ್ನು ನೆನಸುವ ಹಾಗೆ ಮಾನವನು ಎಷ್ಟರವನು?


ಸೌಲನು ಅದಕ್ಕೆ, “ಆದರೆ ನಾನು ಇಸ್ರಾಯೇಲನ ಸಣ್ಣ ಗೋತ್ರವಾದ ಬೆನ್ಯಾಮೀನನು ನಾನಲ್ಲವೋ, ಬೆನ್ಯಾಮೀನನ ಗೋತ್ರದಲ್ಲಿ ನನ್ನ ವಂಶವು ಸಣ್ಣದಾದದ್ದಲ್ಲವೋ? ಇಂಥ ಸಂಗತಿಯನ್ನು ನನಗೇಕೆ ಹೇಳುತ್ತೀ?” ಎಂದನು.


ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.


ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.


ಅದಕ್ಕವನು ಅವರಿಗೆ, “ನನ್ನ ಒಡೆಯನೇ, ಕ್ಷಮಿಸಿರಿ ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು. ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು,” ಎಂದನು.


ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು.


ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಯೆಹೋವ ದೇವರೇ, ನೀವು ನನ್ನನ್ನು ಮನುಷ್ಯರಲ್ಲಿ ಅತ್ಯುನ್ನತ ವ್ಯಕ್ತಿಯಂತೆ ನೋಡಿರುವಿರಿ.


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ಅದಕ್ಕೆ ಸೊಲೊಮೋನನು ದೇವರಿಗೆ, “ನೀವು ನನ್ನ ತಂದೆ ದಾವೀದನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ, ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು