1 ಪೂರ್ವಕಾಲ ವೃತ್ತಾಂತ 17:17 - ಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಯೆಹೋವ ದೇವರೇ, ನೀವು ನನ್ನನ್ನು ಮನುಷ್ಯರಲ್ಲಿ ಅತ್ಯುನ್ನತ ವ್ಯಕ್ತಿಯಂತೆ ನೋಡಿರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರೇ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹುದೂರ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ದೇವರೇ, ಸರ್ವೇಶ್ವರಾ, ನೀವು ನನ್ನನ್ನು ಒಬ್ಬ ಮಹಾನ್ ವ್ಯಕ್ತಿಯನ್ನೋ ಎಂಬಂತೆ ಭಾವಿಸಿದಿರಿ; ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದು ಸಾಲದೆಂದೆಣಿಸಿ ನಿನ್ನ ಸೇವಕನ ಬಹುದೂರ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿದಿ. ದೇವರೇ, ಯೆಹೋವನೇ, ನೀನು ನನ್ನನ್ನು ಕುಲೀನನನ್ನೋ ಎಂಬಂತೆ ಕಟಾಕ್ಷಿಸಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನನ್ನ ವಂಶದವರ ವಿಷಯದಲ್ಲಿಯೂ ನೀನು ವಾಗ್ದಾನ ಮಾಡಿರುವೆ. ದೇವರೇ, ಯೆಹೋವನೇ, ನೀನು ನನ್ನನ್ನು ಒಬ್ಬ ಮಹಾವ್ಯಕ್ತಿಯೋ ಎಂಬಂತೆ ಪರಿಗಣಿಸಿರುವೆ. ಅಧ್ಯಾಯವನ್ನು ನೋಡಿ |