Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:20 - ಕನ್ನಡ ಸಮಕಾಲಿಕ ಅನುವಾದ

20 “ಯೆಹೋವ ದೇವರೇ, ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ಬೇರೆ ದೇವರೇ ಇಲ್ಲವೆಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರಾ, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದಂಥವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು, ಬೇರಾವ ದೇವರೂ ಇಲ್ಲ ಎಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನೇ, ನಿನಗೆ ಸಮಾನರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಬೇರೆ ದೇವರಿಲ್ಲ. ಇಂಥ ಮಹತ್ಕಾರ್ಯ ಮಾಡುವ ದೇವರ ಬಗ್ಗೆ ನಾವು ಕೇಳಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:20
26 ತಿಳಿವುಗಳ ಹೋಲಿಕೆ  

“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ


ಯೆಹೋವ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ, ಮಹಿಮೆಯಲ್ಲಿ ಅತಿಶಯರೂ, ಅದ್ಭುತಗಳನ್ನು ಮಾಡುವವರೂ ಆದ ನಿಮ್ಮ ಹಾಗೆ ಯಾರಿದ್ದಾರೆ?


ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.


ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ.


ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಪರಿಶುದ್ಧ ದೇವರು ಕೇಳುತ್ತಾರೆ.


ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?


ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ಹಾಗೆ ಶಕ್ತರು ಯಾರು ಇದ್ದಾರೆ? ಯೆಹೋವ ದೇವರೇ, ನೀವು ಶಕ್ತರು, ನಿಮ್ಮ ನಂಬಿಗಸ್ತಿಕೆಯು ನಿಮ್ಮನ್ನು ಸುತ್ತುವರಿದಿದೆ.


ಪ್ರಪಂಚದಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು? ಪರಲೋಕ ಜೀವಿಗಳಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು?


ಯೆಹೋವ ದೇವರೇ, ದೇವರುಗಳಲ್ಲಿ ನಿಮ್ಮ ಹಾಗೆ ಯಾರೂ ಇಲ್ಲ. ನಿಮ್ಮ ಕೆಲಸಗಳ ಹಾಗೆ ಒಂದೂ ಇಲ್ಲ.


ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.


“ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ. ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ. ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ.


“ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ.


ಹೀಗಿರುವುದರಿಂದ ಮೇಲಿನ ಆಕಾಶದಲ್ಲಿಯೂ, ಕೆಳಗಿನ ಭೂಮಿಯಲ್ಲಿಯೂ ಯೆಹೋವ ದೇವರೇ ದೇವರೆಂದೂ ಮತ್ತೊಬ್ಬರಿಲ್ಲವೆಂಬುದನ್ನೂ ನೀವು ಈಗ ಗ್ರಹಿಸಿಕೊಂಡು ಮನಸ್ಸಿಗೆ ತಂದುಕೊಳ್ಳಿರಿ.


ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


“ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಸೇವಕನಿಗೆ ನಿಮ್ಮ ಮಹತ್ವವನ್ನೂ ನಿಮ್ಮ ಹಸ್ತಬಲವನ್ನೂ ತೋರಿಸಲಾರಂಭಿಸಿದಿರಿ. ನಿಮ್ಮ ಮಹತ್ಕಾರ್ಯಗಳ ಹಾಗೆಯೂ, ನಿಮ್ಮ ಪರಾಕ್ರಮದ ಹಾಗೆಯೂ ಮಾಡಲು ಶಕ್ತರಾದ ದೇವರು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಯಾರಿದ್ದಾರೆ?


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


ಫರೋಹನು ಮೋಶೆಗೆ, “ನಾಳೆ,” ಎಂದನು. ಆಗ ಮೋಶೆಯು, “ನಮ್ಮ ದೇವರಾಗಿರುವ ಯೆಹೋವ ದೇವರ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ನಿನ್ನ ಮಾತಿನ ಪ್ರಕಾರ ಆಗಲಿ.


ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು.


ಯೆಹೋವ ದೇವರೇ, ನಿಮ್ಮ ಸೇವಕನ ನಿಮಿತ್ತವಾಗಿಯೂ, ನಿಮ್ಮ ಚಿತ್ತಾನುಸಾರವಾಗಿಯೂ ಈ ಮಹಾಕಾರ್ಯಗಳನ್ನೆಲ್ಲಾ ನಡೆಸಿ, ಎಲ್ಲ ವಾಗ್ದಾನಗಳನ್ನು ತಿಳಿಯಪಡಿಸಿರುವಿರಿ.


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ದೇವರಾದ ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ; ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು