Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:21 - ಕನ್ನಡ ಸಮಕಾಲಿಕ ಅನುವಾದ

21 ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ದೇವರಾದ ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವುದಿರುತ್ತದೆ? ದೇವರಾದ ನೀನೇ ಚಿತ್ತೈಯಿಸಿ, ಅದನ್ನು ವಿಮೋಚಿಸಿ, ಸ್ವಪ್ರಜೆಯಾಗಿ ಮಾಡಿಕೊಂಡಿ. ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಿಪಡಿಸಿದಿ. ನೀನು ಐಗುಪ್ತರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ತಮ್ಮ ಇಸ್ರಯೇಲ್ ಪ್ರಜೆಗೆ ಸಮನಾದ ಜನಾಂಗ ಲೋಕದಲ್ಲಿ ಬೇರೆ ಯಾವುದಿದೆ? ದೇವರಾದ ತಾವೇ ಬಂದು ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿಸಿಕೊಂಡಿರಿ; ಆಶ್ಚರ್ಯಕರವಾದ ಅದ್ಭುತಕಾರ್ಯಗಳಿಂದ ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರ ಕೈಯಿಂದ ತಮ್ಮ ಪ್ರಜೆಯನ್ನು ತಪ್ಪಿಸಿ, ರಕ್ಷಿಸಿದಿರಿ. ಅನ್ಯಜನಾಂಗಗಳನ್ನು ಅವರ ನಾಡಿನಿಂದ ಹೊರಡಿಸಿಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವದಿರುತ್ತದೆ? ದೇವನಾದ ನೀನೇ ಚಿತ್ತಯಿಸಿ ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿ ಮಾಡಿಕೊಂಡಿ; ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಪಡಿಸಿದಿ. ನೀನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸ್ರೇಲಿಗೆ ಸಮಾನವಾದ ಜನಾಂಗ ಭೂಲೋಕದಲ್ಲಿ ಎಲ್ಲಿದೆ? ನೀನು ಇಂಥ ಅದ್ಭುತಕಾರ್ಯಗಳನ್ನು ಮಾಡಿರುವುದು ಇಸ್ರೇಲ್ ಜನಾಂಗಕ್ಕಾಗಿಯೇ. ನೀನು ನಮ್ಮನ್ನು ಈಜಿಪ್ಟಿನಿಂದ ಹೊರತಂದು ಸ್ವತಂತ್ರರನ್ನಾಗಿ ಮಾಡಿದೆ. ಹೀಗೆ ನೀನು ನಿನ್ನ ಹೆಸರನ್ನು ಪ್ರಖ್ಯಾತಿಮಾಡಿದೆ. ನೀನು ನಿನ್ನ ಜನರ ಮುಂದೆ ಹೋಗುತ್ತಾ, ಅನ್ಯಜನರು ತಮ್ಮ ದೇಶವನ್ನು ಬಿಟ್ಟುಹೋಗುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:21
29 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದೆ, ಬೆಟ್ಟಗಳು ನಿನ್ನ ಸಮ್ಮುಖಕ್ಕೆ ಕರಗಿ ಹೋದವು.


ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ನಾನು ನನ್ನ ಹೆಸರಿನ ನಿಮಿತ್ತ ನನ್ನ ಕೋಪವನ್ನು ತಡೆ ಮಾಡಿದೆನು. ನಾನು ನನ್ನ ಹೆಸರಿಗೆ ಕಳಂಕ ಬಾರದಂತೆ, ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.


ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ.


ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು.


ಯೆಹೋವ ದೇವರು ವಿಮೋಚಿಸಿದವರು ಹಾಗೆ ಹೇಳಲಿ; ವೈರಿಯ ಕೈಯಿಂದ ಬಿಡುಗಡೆಯಾದವರು ಆ ಕಥೆಯನ್ನು ಹೇಳಲಿ


ಯಾಕೋಬನ ಮತ್ತು ಯೋಸೇಫನ ಸಂತತಿಯವರಾದ ನಿಮ್ಮ ಜನರನ್ನು ನಿಮ್ಮ ಬಲವಾದ ತೋಳಿನಿಂದ ವಿಮೋಚಿಸಿದ್ದೀರಿ.


ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.


ಈಜಿಪ್ಟಿನವರು ಗರ್ವಿಗಳಾಗಿ ಇಸ್ರಾಯೇಲರನ್ನು ಕುಗ್ಗಿಸಿದಾಗ, ನೀವು ಫರೋಹನ ಮೇಲೆಯೂ, ಅವನ ಸಮಸ್ತ ಅಧಿಕಾರಿಗಳ ಮೇಲೆಯೂ, ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದಿರಿ. ಈ ಪ್ರಕಾರವೇ ನೀವು ಇಂದಿನವರೆಗೂ ನಿಮ್ಮ ಹೆಸರಿನ ಕೀರ್ತಿಯನ್ನು ಸ್ಥಾಪಿಸಿದ್ದೀರಿ.


ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.


ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಮೊರೆಯಿಡುವಾಗೆಲ್ಲಾ ಅವರು ಸಮೀಪವಾಗಿಯೇ ಇದ್ದಾರಲ್ಲಾ. ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವರು?


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


“ಯೆಹೋವ ದೇವರೇ, ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.


ನೀವು ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಮಾಡಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ.


ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು