1 ಪೂರ್ವಕಾಲ ವೃತ್ತಾಂತ 17:5 - ಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು, ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಒಂದು ಗುಡಾರದ ಸ್ಥಳದಿಂದ ಇನ್ನೊಂದು ಗುಡಾರದ ಸ್ಥಳಕ್ಕೂ, ಒಂದು ತಂಗುವ ಸ್ಥಳದಿಂದ ಇನ್ನೊಂದು ತಂಗುವ ಸ್ಥಳಕ್ಕೂ ಹೋಗುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ಇಸ್ರಾಯೇಲ್ಯರನ್ನು [ಐಗುಪ್ತ ದೇಶದಿಂದ] ಬರ ಮಾಡಿದಂದಿನಿಂದ ಇಂದಿನವರೆಗೂ ಮನೆಯಲ್ಲಿ ವಾಸಮಾಡಲಿಲ್ಲ; ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5-6 ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿದಂದಿನಿಂದ ಈ ದಿವಸದ ತನಕ ನಾನು ಮನೆಯಲ್ಲಿ ವಾಸವಾಗಿರಲಿಲ್ಲ. ನಾನು ಗುಡಾರದಲ್ಲಿಯೇ ಇದ್ದುಕೊಂಡು ಸಂಚರಿಸುತ್ತಿದ್ದೆನು. ಇಸ್ರೇಲರ ನಾಯಕರಾಗುವದಕ್ಕೆ ನಾನು ಕೆಲವರನ್ನು ಆರಿಸಿಕೊಂಡಿದ್ದೇನೆ. ಆ ನಾಯಕರು ನನ್ನ ಜನರಿಗೆ ಕುರುಬರಂತಿದ್ದಾರೆ. ಅವರೊಂದಿಗೆ ನಾನು ಬೇರೆಬೇರೆ ಸ್ಥಳಗಳಿಗೆ ಸಂಚರಿಸುತ್ತಿದ್ದಾಗ ನಾನೆಂದೂ ನನಗೊಂದು ಆಲಯವನ್ನು ದೇವದಾರು ಮರದಿಂದ ಕಟ್ಟಲು ಕೇಳಿಕೊಂಡಿರಲಿಲ್ಲ.’ ಅಧ್ಯಾಯವನ್ನು ನೋಡಿ |