1 ಪೂರ್ವಕಾಲ ವೃತ್ತಾಂತ 17:9 - ಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ಅಲ್ಲೇ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು; ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಈ ದೇಶವನ್ನು ನನ್ನ ಜನರಾದ ಇಸ್ರೇಲರಿಗೆ ಕೊಡುವೆನು; ಅವರು ಮರಗಳನ್ನು ನೆಟ್ಟು ಅದರ ನೆರಳಡಿಯಲ್ಲಿ ಸಮಾಧಾನದಿಂದ ವಾಸಿಸುವರು; ಅವರನ್ನು ಯಾರೂ ಬಾಧಿಸರು. ದುಷ್ಟರು ಮುಂಚಿನಂತೆ ಅವರಿಗೆ ಕೇಡುಮಾಡರು. ಅಧ್ಯಾಯವನ್ನು ನೋಡಿ |