Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:10 - ಕನ್ನಡ ಸಮಕಾಲಿಕ ಅನುವಾದ

10 ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 (ತೋವಿಗೂ ಹದರೆಜೆರನಿಗೂ ವಿರೋಧವಿತ್ತು). ದಾವೀದನು ಹದರೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ವಿಧವಿಧವಾದ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 (ತೋವಿಗೂ ಹದರೆಜರನಿಗೂ ವಿರೋಧವಿತ್ತು.) ದಾವೀದನು ಹದರೆಜರನ ಮೇಲೆ ಬಿದ್ದು ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕೆಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:10
6 ತಿಳಿವುಗಳ ಹೋಲಿಕೆ  

ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.


ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಕಳುಹಿಸಿದನು.


ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ, ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.


ದಾವೀದನು ಚೋಬದ ಅರಸನಾದ ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,


ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು