1 ಪೂರ್ವಕಾಲ ವೃತ್ತಾಂತ 18:13 - ಕನ್ನಡ ಸಮಕಾಲಿಕ ಅನುವಾದ13 ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದ್ದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದಾವೀದನು ಎದೋವಿುನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಬ್ಷೈಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |